ಸಿಎಂ ಬಿಎಸ್‌ವೈ, ಕೋವಿಡ್ ಉಸ್ತುವಾರಿ ಸಚಿವರ ಸಭೆ:ಮದುವೆಗೆ ಷರತ್ತುಬದ್ಧ ಅನುಮತಿಗೆ ನಿರ್ಧಾರ

ಬೆಂಗಳೂರು : ಲ್ಯಾಣ ಮಂಟಪಗಳಲ್ಲಿ ಮದುವೆಗೆ ಷರತ್ತುಬದ್ಧ ಅನುಮತಿ ನೀಡಲಾಗುವುದು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಚಿವರು, ಅಧಿಕಾರಿಗಳ ಜೊತೆಗೆ ರಾಜ್ಯದಲ್ಲಿನ ಕೊರೊನಾ ನಿಯಂತ್ರಣ ಕುರಿತು ಸಭೆ ನಡೆಯಿತು.
ರಾಜ್ಯದಲ್ಲಿ ಜೂನ್28ರಿಂದ ( ಸೋಮವಾರದಿಂದ) ಕಲ್ಯಾಣ ಮಂಟಪ, ಹೊಟೇಲ್‌, ಪಾರ್ಟಿ ಹಾಲ್ ಮತ್ತು ರೆಸಾರ್ಟ್ ಗಳಲ್ಲಿ‌ 40 ಜನಕ್ಕೆ ಮಿತಿಗೊಳಿಸಿ ಮದುವೆ ಸಮಾರಂಭಗಳಿಗೆ ಅನುಮತಿ ನೀಡಲು ತೀರ್ಮಾನಿಸಲಾಗಿದೆ. ಆದರೆ ಭಾಗಿಯಾಗುವವರಿಗೆ ಪಾಸ್ ಕಡ್ಡಾಯವಾಗಿರುತ್ತದೆ
ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಕಲ್ಯಾಣ ಮಂಟಪ ಹೋಟೆಲ್‌ ಪಾರ್ಟಿ ಹಾಲ್ ಮತ್ತು ರೆಸಾರ್ಟ್ ಗಳಲ್ಲಿ‌ 40 ಜನ ಕ್ಕೆ ಸೀಮಿತಗೊಳಿಸಿ ವೈಯಕ್ತಿಕ ಪಾಸ್ ಗಳೊಂದಿಗೆ ಸೋಮವಾರದಿಂದ ಜಾರಿಗೆ ಬರುವಂತೆ ಮದುವೆ ಸಮಾರಂಭಗಳಿಗೆ ಅನುಮತಿ ನೀಡಲು ತೀರ್ಮಾನಿಸಲಾಯಿತು.
ಕೋವಿಡ್ 19 ರ ರೂಪಾಂತರಿ ಡೆಲ್ಟಾ ಬಗ್ಗೆ ರಾಜ್ಯದಲ್ಲಿರುವ ಪ್ರಸ್ತುತ ಇರುವ ಪರಿಸ್ಥಿತಿ ಯ ಬಗ್ಗೆ ಪರಾಮರ್ಶೆ ನಡೆಸಲಾಯಿತು. ರಾಜ್ಯದಲ್ಲಿ ಡೆಲ್ಟಾ ಪ್ಲಸ್‌ ವೈರಸ್ ಸಧ್ಯಕ್ಕೆ ಹತೋಟಿಯಲ್ಲಿ ದ್ದು ವೈರಸ್ ಬಗ್ಗೆ ತೀವ್ರ ನಿಗಾ ಇಡಲು ಸೂಚಿಸಲಾಯಿತು.
ಮಹಾರಾಷ್ಟ್ರ ದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡೆಲ್ಟಾ ಪ್ಲಸ್‌ ವೈರಸ್ ಕಂಡುಬರುತ್ತಿದೆ. ಹೀಗಾಗಿ ಗಡಿಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಯಿತು. ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರ ಬಗ್ಗೆ ತೀವ್ರ ನಿಗಾ ಇರಿಸಬೇಕು. ಅವರನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸುವಂತೆ ಸೂಚಿಸಲಾಯಿತು ಅಪೌಷ್ಟಿಕತೆ ಇರುವ ಮಕ್ಕಳನ್ನು ಗುರುತಿಸಿ ಅವರಿಗೆ ಸೂಕ್ತ ಪೌಷ್ಟಿಕ ಆಹಾರ ಒದಗಿ ವೈದ್ಯಕೀಯ ‌ನಿಗಾ ವಹಿಸಲು ಸೂಚಿಸಲಾಯಿತು.

ಪ್ರಮುಖ ಸುದ್ದಿ :-   ಮೇಕೆದಾಟು ಯೋಜನೆಗೆ ತಮಿಳುನಾಡು ಸೇರಿ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ : ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement