ಯುಪಿ ಸಿಎಂ ಜೊತೆ ಅಯೋಧ್ಯೆ ಅಭಿವೃದ್ಧಿ ಯೋಜನೆ ಬಗ್ಗೆ ಚರ್ಚಿಸಿದ ಪ್ರಧಾನಿ ಮೋದಿ

ಅಯೋಧ್ಯೆ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶನಿವಾರ ವರ್ಚುವಲ್‌ ಕಾನ್ಫೆರೆನ್ಸ್‌ ಮೂಲಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತುಕತೆ ನಡೆಸಿದ್ದಾರೆ.
ಅಯೋಧ್ಯೆಯ ಅಭಿವೃದ್ಧಿಯ ಭವಿಷ್ಯದ ದೃಷ್ಟಿಯಿಂದ ರಸ್ತೆಗಳು, ಮೂಲಸೌಕರ್ಯ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ ಮತ್ತು ಹಲವಾರು ಯೋಜನೆಗಳ ಪ್ರಧಾನಿ ಮೋದಿ ಪರಿಶೀಲಿಸಿದ್ದಾರೆ.
ನಡೆಯುತ್ತಿರುವ ಯೋಜನೆಗಳನ್ನು ಪ್ರಧಾನಿಯವರು ಪರಿಶೀಲಿಸಿದ್ದಾರೆ. ರಾಮ ಮಂದಿರ ನಿರ್ಮಾಣ ಪೂರ್ಣಗೊಳ್ಳುವವರೆಗೆ ಅಯೋಧ್ಯೆಯನ್ನು ಸ್ಮಾರ್ಟ್ ಸಿಟಿಯನ್ನಾಗಿ ಮಾಡುವತ್ತ ಗಮನಹರಿಸುವ ಬಗ್ಗೆಯೂ ಸೂಚಿಸಿದ್ದಾರೆ.
ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ”ನಾವು ನಿರ್ಮಿಸುತ್ತಿರುವ ಅಯೋಧ್ಯೆಯು ಪ್ರತಿಯೊಬ್ಬ ಭಾರತೀಯನಿಗಾಗಿ ಆಗಿರಬೇಕು,” ಎಂದು ಹೇಳಿದ್ದಾರೆ ಎನ್ನಲಾಗಿದೆ.
ಸಾಂಸ್ಕೃತಿಕ ಪರಂಪರೆಯನ್ನು ಪ್ರತಿನಿಧಿಸುವ ಈ ನಗರವನ್ನು ಸಂಪೂರ್ಣವಾಗಿ ತಂತ್ರಜ್ಞಾನ ಆಧಾರಿತವಾಗಿ ಸಿದ್ಧಪಡಿಸುವ ನಿಟ್ಟಿನಲ್ಲಿ, ಮಾಸ್ಟರ್ ಪ್ಲ್ಯಾನ್ ಬಗ್ಗೆ ಮೋದಿ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.
ಈ ವರ್ಷದ ಫೆಬ್ರವರಿಯಲ್ಲಿ ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಉತ್ತರ ಪ್ರದೇಶ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಅನುಮೋದಿಸಿದೆ. ಜಿಲ್ಲಾಡಳಿತಕ್ಕೆ ರಾಜ್ಯ ಸರ್ಕಾರವು ಸುಮಾರು 1,000 ಕೋಟಿ ರೂ.ಗಳನ್ನು ನೀಡಿದೆ. ಕೇಂದ್ರ ಸರ್ಕಾರವು 250 ಕೋಟಿ ರೂ. ನೀಡಿದೆ,” ಎಂದು ಮುಖ್ಯಮಂತ್ರಿ ತಿಳಿಸಿದ್ದರು.
ಅಯೋಧ್ಯೆಯಲ್ಲಿ ಪ್ರವಾಸೋದ್ಯಮ ಮತ್ತು ಯಾತ್ರಾಸ್ಥಳದ ಕುರಿತು ಮಾತನಾಡಿದ ಮುಖ್ಯಮಂತ್ರಿ, “ಅಯೋಧ್ಯೆಯು ರಾಮಜನ್ಮ ಭೂಮಿಯಾಗಿ ಜನಪ್ರಿಯವಾಗಿದೆ. ಭಗವಾನ್‌ ಶ್ರೀರಾಮನ ಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದೆ. ನಗರವು ಆಧ್ಯಾತ್ಮಿಕತೆಗೆ ಹಾಗೂ ಪ್ರವಾಸೋದ್ಯಮಕ್ಕೆ ಸಹಕಾರಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇಲ್ಲಿಯ ಅಭಿವೃದ್ಧಿಗೆಕೆಲಸ ಮಾಡುತ್ತಿವೆ ಎಂದು ತಿಳಿಸಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ