ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಪಾಸಿಟಿವಿ ದರ ಶೇ. 2.58

ಬೆಂಗಳೂರು: ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಗಳ ಸಂಖ್ಯೆ 1,05,226ಕ್ಕೆ ಕುಸಿದಿದೆ. ಕೊರೊನಾ ಸೋಂಕಿನ ಪಾಸಿಟಿವಿ ದರ ಶೇ. 2.58ರಷ್ಟಿದೆ ಹಾಗೂ ಸೋಂಕಿತರ ಸಾವಿನ ಪ್ರಮಾಣ ಶೇ. 2.69ರಷ್ಟುದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಕಳೆದ 24 ತಾಸಿನಲ್ಲಿ (ಶನಿವಾರ) ರಾಜ್ಯದಲ್ಲಿ ರಾಜ್ಯದಲ್ಲಿ ಹೊಸದಾಗಿ 4272 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಹಾಗೂ 115 ಮಂದಿ ಮೃತಪಟ್ಟಿದ್ದಾರೆ‌ .ಇದೇವೇಳೆ 6146 ಮಂದಿ ಚೇತರಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ಸೋಂಕು ಸೇರಿದಂತೆ ಒಟ್ಟಾರೆಯಾಗಿ ಸೋಂಕಿನ ಸಂಖ್ಯೆ 28,26,756 ಕ್ಕೆ ಏರಿದೆ. ರಾಜ್ಯದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 34,539 ಕ್ಕೆ ಏರಿಕೆಯಾಗಿದೆ. ಚೇತರಿಸಿಕೊಂಡವರ ಸಂಖ್ಯೆ 26,84,997 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಶನಿವಾರ 955 ದೃಢಪಟ್ಟಿದೆ.1,174 ಮಂದಿ ಚೇತರಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,65,010 ಮಂದಿಗೆ ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಇಲ್ಲಿಯ ತನಕ 3,33,76,392ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

26-06-2021 HMB Kannada

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement