ಭಾರತದಲ್ಲಿ 48,698 ಕೊರೊನಾ ಸೋಂಕಿತರು ಪತ್ತೆ

ನವದೆಹಲಿ: ಭಾರತದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಕಳೆದ ಒಂದು ದಿನದಲ್ಲಿ 48,698 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 64,818 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಒಂದೇ ದಿನದಲ್ಲಿ 1,183 ಮಂದಿ ಮೃತಪಟ್ಟಿದ್ದು, ಇಲ್ಲಿಯ ವರೆಗೆ 3,94,493 ಮೃತಪಟ್ಟಿದ್ದಾರೆ. ಒಟ್ಟು 3,01,83,143 ಪ್ರಕರಣಗಳಿವೆ, 2,91,93,085 ಮಂದಿ ಇದುವರೆಗೆ ಗುಣಮುಖರಾಗಿದ್ದಾರೆ. 5,95,565 ಸಕ್ರಿಯ ಪ್ರಕರಣಗಳಿವೆ.
ಕೊರೊನಾ ರೂಪಾಂತರಿಗಳ ವಿರುದ್ಧ ಈ ಎರಡು ಲಸಿಕೆ ಹೋರಾಡಲಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆಗಳು ಎಲ್ಲ ಕೊರೊನಾ ರೂಪಾಂತರಿಗಳ ವಿರುದ್ಧ ಕಾರ್ಯನಿರ್ವಹಿಸಲಿವೆ ಎಂದು ಐಸಿಎಂಆರ್‌ನ ಮಹಾನಿರ್ದೇಶಕ ಡಾ. ಬಲರಾಮ್ ಭಾರ್ಗವ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ 48 ಡೆಲ್ಟಾ ಪ್ಲಸ್‌ ಪ್ರಕರಣಗಳು ಪತ್ತೆಯಾಗಿವೆ. ಆದರೆ ಮುಖ್ಯವಾಗಿ, ಅವುಗಳನ್ನು ಬಹಳ ಸ್ಥಳೀಕರಿಸಲಾಗಿದೆ. ಈ ವೈರಸ್ ಅನ್ನು ಈಗ ಪ್ರತ್ಯೇಕಿಸಲಾಗಿದೆ ಎಂದು ಅವರು ತಿಳಿಸಿದರು.
ಆಲ್ಫಾ, ಬೀಟಾ, ಗಾಮಾ ಮತ್ತು ಡೆಲ್ಟಾಕ್ಕಾಗಿ ಅದೇ ಪರೀಕ್ಷೆಯನ್ನು ಮಾಡುತ್ತಿದ್ದೇವೆ. ಲಸಿಕೆ ಪರಿಣಾಮವನ್ನು ಪರೀಕ್ಷಿಸಲು ಪ್ರಯೋಗಾಲಯ ಪರೀಕ್ಷೆಯನ್ನು ಎದುರು ನೋಡುತ್ತಿದ್ದೇವೆ ಮತ್ತು ಸುಮಾರು 7 ರಿಂದ 10 ದಿನಗಳ ಅವಧಿಯಲ್ಲಿ ನಾವು ಫಲಿತಾಂಶಗಳನ್ನು ತಿಳಿಯಬೇಕಾಗಿದೆ ಎಂದು ಅವರು ಹೇಳಿದರು.
ಪ್ರಸ್ತುತ 12 ರಾಷ್ಟ್ರಗಳಿರುವ ಡೆಲ್ಟಾ ಪ್ಲಸ್, ಸಾರ್ಸ್ ಕೋವ್ 2 ರೂಪಾಂತರಗಳಾದ ಅಲ್ಫಾ,ಬೀಟಾ, ಗಾಮ ಸೇರಿದಂತೆ ಎಲ್ಲಾ ನಾಲ್ಕು ಕೊರೊನಾ ರೂಪಾಂತರ ವಿರುದ್ಧ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆಗಳು ಕಾರ್ಯನಿರ್ವಹಸಲಿವೆ ಎಂದರು.

ಪ್ರಮುಖ ಸುದ್ದಿ :-   ವೀಡಿಯೊ...| ಶಾಲೆಯಲ್ಲೇ ಹೊಡೆದಾಡಿಕೊಂಡ ಪ್ರಾಂಶುಪಾಲೆ-ಶಿಕ್ಷಕಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement