ಕರ್ನಾಟಕದಲ್ಲಿ ಶೇ. 2.18ಕ್ಕೆ ಇಳಿದ ಪಾಸಿಟಿವಿಟಿ ದರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣ ಸಂಖ್ಯೆ ಕಡಿಮೆಯಾಗುತ್ತಿದ್ದು ಭಾನುವಾರ 3,604 ಕೊರೊನಾ ಸೋಂಕು ದೃಢಪಟ್ಟ ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,34,630ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 89 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 34,743ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ರಾಜ್ಯದಲ್ಲಿ ಇದೇ ಸಮಯದಲ್ಲಿ 7,699 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 26,98,822ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 1,01,042 ಸಕ್ರೀಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಭಾನುವಾರ 788 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,11,430ಕ್ಕೆ ಏರಿಕೆಯಾಗಿದೆ. ಸೋಂಕಿಗೆ 11 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 2.18ಕ್ಕೆ ಇಳಿದಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ನಿಮ್ಮ ಕಾಮೆಂಟ್ ಬರೆಯಿರಿ

advertisement