ಡೆಲ್ಟಾ ಪ್ಲಸ್‌ ವೈರಸ್ ಪತ್ತೆಗೆ 600 ಮಾದರಿಗಳ ಜೀನೋಮ್ ಸೀಕ್ವೆನ್ಸ್: ಸಚಿವ ಸುಧಾಕರ್

ಬೆಂಗಳೂರು: ಕೋವಿಡ್ ಹೊಸ ವೈರಾಣು ನಿಯಂತ್ರಣಕ್ಕೆ ಜೀನೋಮ್ ಸೀಕ್ವೆನ್ಸ್ ಮಾಡುತ್ತಿದ್ದು, 600 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೆಲ್ಟಾ ಪ್ಲಸ್ ವೈರಾಣು ಸೋಂಕಿನ ಇಬ್ಬರು ಪತ್ತೆಯಾಗಿದ್ದಾರೆ. ಇನ್ನೂ 600 ಮಾದರಿಗಳನ್ನು ಜಿನೋಮ್ ಸೀಕ್ವೆನ್ಸ್ ಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ 50 ಲಕ್ಷಕ್ಕೂ ಅಧಿಕ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ದೇಶದ ಯಾವುದೇ ನಗರದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಲಸಿಕೆ ನೀಡಿಲ್ಲ. ಹೀಗಾಗಿ ಇದೊಂದು ದಾಖಲೆಯಾಗಿದೆ. ರಾಜ್ಯದಲ್ಲಿ ಮೊದಲನೇ ಡೋಸ್ ಪಡೆದವರ ಪ್ರಮಾಣ ಶೇ.40 ರಷ್ಟಿದೆ (1.85 ಕೋಟಿ). 45 ಲಕ್ಷಕ್ಕೂ ಹೆಚ್ಚು ಜನರು ಎರಡೂ ಡೋಸ್ ಪಡೆದಿದ್ದಾರೆ.ಲಸಿಕೆ ನೀಡಲು ಆದ್ಯತೆಯಲ್ಲಿ ಕೆಲ ಗುಂಪುಗಳನ್ನು ರಚಿಸಲಾಗಿದೆ. 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಪಾಲಕರಿಗೆ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲಾಗುವುದು ಎಂದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement