ನಾಳೆ ಶಿಕ್ಷಣ ಸಚಿವರ ಉನ್ನತಮಟ್ಟದ ಸಭೆ: ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನಾಂಕ, ಶಾಲಾ ಆರಂಭದ ಬಗ್ಗೆ ನಿರ್ಧಾರ..?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ತೀವ್ರತೆ ಕಡಿಮೆಯಾಗುತ್ತಿರುವಾಗ ಶಾಲಾ-ಕಾಲೇಜುಗಳ ಪುನರಾರಂಭದ ಬಗ್ಗೆ ಶಿಕ್ಷಣ ಸಚಿವ ಸುರೇಶ್‌ಕುಮಾರ್ ನಾಳೆ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.
ಕಳೆದ ಒಂದೂವರೆ ವರ್ಷದಿಂದ ಬಾಗಿಲು ಹಾಕಿರುವ ಶಾಲೆಗಳನ್ನು ಆರಂಭಿಸುವಂತೆ ತಜ್ಞರ ಸಮಿತಿಯು ವರದಿ ನೀಡಿದೆ. ಕಾಲೇಜುಗಳನ್ನು ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡಿದ ನಂತರ ಜುಲೈ ಇಲ್ಲವೆ ಆಗಸ್ಟ್‌ನಲ್ಲಿ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರು ಈಗಾಗಲೇ ಹೇಳಿದ್ದಾರೆ. ಆದರೆ, ೧ ರಿಂದ ೧೦ನೇ ತರಗತಿಗಳನ್ನು ಸದ್ಯಕ್ಕೆ ಆರಂಭಿಸುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕಳೆದ ವಾರ ಹೇಳಿದ್ದರು. ಜೊತೆಗೆ ಎಸ್ಸೆಲ್ಸಿ ಪರೀಕ್ಷೆಗಳ ದಿನಾಂಕ ಪ್ರಕಟಿಸಬೇಕಿದೆ.
ಶಾಲೆಗಳ ಪುನರಾರಂಭದ ಬಗ್ಗೆ ಚರ್ಚಿಸಲು ಶಿಕ್ಷಣ ಸಚಿವ ಸುರೇಶಕುಮಾರ್ ನಾಳೆ (ಸೋಮವಾರ) ಶಿಕ್ಷಣ ಇಲಾಖೆಉ ಉನ್ನತಾಧಿಕಾರಿಗಳ ಜತೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿ ಜಿಪಂ ಸಿಇಓಗಳು ಹಾಗೂ ಡಿಡಿಪಿಐಗಳ ಜತೆ ವೀಡಿಯೊ ಕಾನ್ಫರೆಸ್ನ್ ಮೂಲಕ ಚರ್ಚೆ ನಡೆಸಲಿದ್ದಾರೆ.
ಈ ಸಭೆಯಲ್ಲಿ ದೇಶದ ಇತರ ರಾಜ್ಯಗಳಲ್ಲಿ ಶಾಲೆಗಳನ್ನು ತೆರೆಯಲು ತೆಗೆದುಕೊಂಡಿರುವ ಕ್ರಮಗಳು, ಹಾಗೆಯೇ ರಾಜ್ಯದಲ್ಲೂ ಶಾಲೆಗಳನ್ನು ಪುನರಾರಂಭಿಸಬಹುದೇ, ಆನ್‌ಲೈನ್ ತರಗತಿಯ ಬದಲು ಭೌತಿಕ ತರಗತಿಗಳನ್ನು ನಡೆಸುವುದು ಸೂಕ್ತವೇ ಎಂಬೆಲ್ಲ ವಿಚಾರಗಳ ಬಗ್ಗೆ ಚರ್ಚೆಗಳು ನಡೆಯಲಿವೆ..
ಮೊದಲಿಗೆ ವಿದ್ಯಾಗಮ ಯೋಜನೆಯನ್ನು ಆರಂಭಿಸಿ ನಂತರ ಪಾಳಿ ಪದ್ಧತಿಯಲ್ಲಿ ತರಗತಿಗಳನ್ನು ಆರಂಭಿಸುವುದು ಸೂಕ್ತವೇ ಎಂಬ ಬಗ್ಗೆಯೂ ಚರ್ಚೆಗಳು ನಡೆಯಲಿವೆ.ಸೋಂಕು ಕಡಿಮೆಯಾಗಿರುವ ಉತ್ತರ ಪ್ರದೇಶ, ದೆಹಲಿ, ಹರಿಯಾಣ, ಬಿಹಾರ ಮತ್ತು ತಮಿಳಿನಾಡು ತೆಲಂಗಾಣ ರಾಜ್ಯಗಳು ಜುಲೈನಿಂದ ಶಾಲಾ-ಕಾಲೇಜುಗಳನ್ನು ಆರಂಭಿಸಲು ಮುಂದಾಗಿದೆ.
ಹಾಗಾಗಿ ರಾಜ್ಯದಲ್ಲೂ ಶಾಲೆಗಳನ್ನು ಆರಂಭಿಸುವ ಬಗ್ಗೆ ಈ ಸಭೆಯಲ್ಲಿ ಸಮಗ್ರ ಚರ್ಚೆ ನಡೆಯಲಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಿರ್ಧಾರ..:
ಜುಲೈ ಮೂರನೇ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಲು ಸಿದ್ಧತೆಗಳು ನಡೆದಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ದಿನಾಂಕಗಳು ಈ ಸಭೆಯಲ್ಲಿ ಅಂತಿಮಗೊಳ್ಳುವ ಸಾಧ್ಯತೆಗಳಿವೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಶಿಕ್ಷಣ ಇಲಾಖೆ ಈಗಾಗಲೇ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.ಹೀಗಾಗಿ ಈ ಸಭೆಯ ನಂತರ ಎಸ್ಸೆಸ್ಸೆಲ್ಸಿ ದಿನಾಂಕ ನಿರ್ಧರಿಸುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ನಾಮಪತ್ರ ವಾಪಸ್ ಪಡೆದ ದಿಂಗಾಲೇಶ್ವರ ಸ್ವಾಮೀಜಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement