ಉತ್ತರ ಪ್ರದೇಶ, ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ:ಮಾಯಾವತಿ

ಲಕ್ನೊ: ಅಸದುದ್ದೀನ್ ಒವೈಸಿ ನೇತೃತ್ವದ ಎಐಎಂಐಎಂ ಜೊತೆ ಒಪ್ಪಂದ ಮಾಡಿಕೊಂಡ ವರದಿಗಳ ಮಧ್ಯೆ ಮುಂಬರುವ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿ ಹೋರಾಡುವುದಾಗಿ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಭಾನುವಾರ ಹೇಳಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷವು ಶಿರೋಮಣಿ ಅಕಾಲಿ ದಳದೊಂದಿಗೆ ಮೈತ್ರಿ ಘೋಷಿಸಿದೆ ಎಂದು ಮಾಯಾವತಿ ಸ್ಪಷ್ಟಪಡಿಸಿದರು. ಎಸ್‌ಎಡಿ ಅಧ್ಯಕ್ಷ ಸುಖ್‌ಬೀರ್ ಬಾದಲ್ ಅವರು 117 ಸ್ಥಾನಗಳಲ್ಲಿ 20 ರಲ್ಲಿ ಬಿಎಸ್‌ಪಿ ಸ್ಪರ್ಧಿಸಲಿದ್ದು, ಉಳಿದ ಪಕ್ಷಗಳಲ್ಲಿ ತಮ್ಮ ಪಕ್ಷ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ.
“ಈ ಸುದ್ದಿಯನ್ನು ಮಾಧ್ಯಮ ಸುದ್ದಿ ವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತಿದೆ, ಮುಂಬರುವ ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ವಿಧಾನಸಭಾ ಸಾರ್ವತ್ರಿಕ ಚುನಾವಣೆಗಳಲ್ಲಿ ಎಐಎಂಐಎಂ ಮತ್ತು ಬಿಎಸ್ಪಿ ಒಟ್ಟಾಗಿ ಹೋರಾಡುತ್ತವೆ. ಈ ಸುದ್ದಿ ಸಂಪೂರ್ಣವಾಗಿ ಸುಳ್ಳು, ದಾರಿತಪ್ಪಿಸುವ ಮತ್ತು ಸತ್ಯರಹಿತವಾಗಿದೆ. ಇದರಲ್ಲಿ ಸತ್ಯದ ಒಂದು ಭಾಗವೂ ಇಲ್ಲ ಮತ್ತು ಬಿಎಸ್ಪಿ ಅದನ್ನು ನಿರಾಕರಿಸುತ್ತದೆ, ”ಎಂದು ಮಾಯಾವತಿ ಸರಣಿ ಟ್ವೀಟ್‌ನಲ್ಲಿ ಹೇಳಿದ್ದಾರೆ.
“ಈ ನಿಟ್ಟಿನಲ್ಲಿ, ಪಂಜಾಬ್ ಹೊರತುಪಡಿಸಿ, ಬಿಎಸ್ಪಿ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಡ್ವೀಟ್‌ನಲ್ಲಿ ತಿಳಿಸಿದ್ದಾರೆ.
ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ, ಮತ್ತು ಗೋವಾದಲ್ಲಿ ವಿಧಾನಸಭಾ ಚುನಾವಣೆ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿದೆ.
2014 ರಲ್ಲಿ, ಮಾಯಾವತಿಯ ಪಕ್ಷವು ಒಂದು ಲೋಕಸಭಾ ಸ್ಥಾನವನ್ನೂ ಗೆಲ್ಲಲಿಲ್ಲ, ಮತ್ತು 2017 ರ ಉತ್ತರ ವಿಧಾನಸಭಾ ಚುನಾವಣೆಯಲ್ಲಿ ಅದು ಕೇವಲ 19 ಸ್ಥಾನಗಳನ್ನು ಗಳಿಸಿತು.
ವರ್ಷಗಳಲ್ಲಿ ಬಿಎಸ್ಪಿಯ ಬೆಂಬಲ ನೆಲೆ ಕ್ಷೀಣಿಸುತ್ತಿರುವುದರಿಂದ, ಬಿಜೆಪಿ ಮತ್ತು ಸಮಾಜವಾದಿ ಪಕ್ಷವು 2022 ರಲ್ಲಿ ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ದಲಿತ ಮತದಾರರನ್ನು ಸೆಳೆಯಲು ಪ್ರಯತ್ನಿಸುತ್ತಿದೆ.
ಏಪ್ರಿಲ್‌ನಲ್ಲಿ ಅಖಿಲೇಶ್ ಯಾದವ್ ಅವರು ಸಮಾಜವಾದಿ ಪಕ್ಷ (ಎಸ್‌ಪಿ) ದಲಿತ ಐಕಾನ್ ಡಾ.ಬಿ.ಆರ್ ಬಾಬಾ ಸಾಹೇಬ್ ಅಂಬೇಡ್ಕರ್ ವಾಹಿನಿಯನ್ನು ರಚಿಸಲಿದ್ದಾರೆ ಎಂದು ಘೋಷಿಸಿದ್ದಾರೆ. ಬಾಬಾ ಸಾಹೇಬ್ ವಾಹಿನಿ ಮೂಲಕ ದಲಿತರನ್ನು ಸಮಾಜವಾದಿ ಮಡಿಲಿಗೆ ಕರೆತರುವುದು ಮತ್ತು ಸಾಮಾಜಿಕ ಶೋಷಣೆಯಿಂದ ರಕ್ಷಣೆ ನೀಡುವುದು ತಮ್ಮ ಉದ್ದೇಶವಾಗಿದೆ ಎಂದು ಹೇಳಿಕೊಂಡಿದ್ದಾರೆ.
ಡಾ.ಅಂಬೇಡ್ಕರ್ ಹೆಸರಿನಲ್ಲಿ ಸ್ಮಾರಕವನ್ನು ನಿರ್ಮಿಸುವುದಾಗಿ ಬಿಜೆಪಿ ಈಗ ಘೋಷಿಸಿದೆ.
2019 ರ ಲೋಕಸಭಾ ಚುನಾವಣೆಯಲ್ಲಿ ಎಸ್‌ಪಿ ಮತ್ತು ಬಿಎಸ್‌ಪಿ ಮಿತ್ರ ಪಕ್ಷಗಳಾಗಿದ್ದವು. ಆದರೆ, ಲೋಕಸಭಾ ಚುನಾವಣೆಯ ನಂತರ, ಮಾಯಾವತಿ ತಮ್ಮ ಪಕ್ಷವು ಮತ್ತೆ ಎಸ್‌ಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಿ ಪಕ್ಷದೊಂದಿಗೆ ಸಂಬಂಧವನ್ನು ಕಿತ್ತುಹಾಕಿತು

ಪ್ರಮುಖ ಸುದ್ದಿ :-   ವೀಡಿಯೊ...| ಹೆಲಿಕಾಪ್ಟರ್ ಹತ್ತುವಾಗ ಕಾಲು ಜಾರಿ ಬಿದ್ದ ಮಮತಾ ಬ್ಯಾನರ್ಜಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement