ನೇಮಕಗೊಂಡ ಕೆಲವೇ ವಾರಗಳಲ್ಲಿ ಹುದ್ದೆ ತಯಜಿಸಿದ ಟ್ವಿಟರ್ ಕುಂದುಕೊರತೆ ಅಧಿಕಾರಿ..!

ನವದೆಹಲಿ: ಭಾರತ ಸರ್ಕಾರ ಜಾರಿಗೆ ತಂದಿರುವ ಹೊಸ ಐಟಿ ಕಾನೂನುಗಳ ಪ್ರಕಾರ ಟ್ವಿಟರ್ ನಿಂದ ನೇಮಕಗೊಂಡಿದ್ದ ಕುಂದುಕೊರತೆ ಅಧಿಕಾರಿಯ ಹುದ್ದೆಯಿಂದ ನಿರ್ಗಮಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾನೂನು ಪಾಲನೆಯ ಹಿನ್ನೆಲೆಯಲ್ಲಿ ಟ್ವಿಟರ್ ಸಂಸ್ಥೆ ಮಧ್ಯಂತರವಾಗಿ ಧರ್ಮೇಂದ್ರ ಚತುರ್ ಎಂಬ ವ್ಯಕ್ತಿಯನ್ನು ಭಾರತದ ಗ್ರೀವಿಯೆನ್ಸ್ ಅಧಿಕಾರಿ (ಗ್ರಾಹರ ದೂರಿಗೆ ಸ್ಪಂದಿಸುವ ಅಧಿಕಾರಿ)ಯನ್ನಾಗಿ ನೇಮಕ ಮಾಡಿತ್ತು.
ಈಗ ಧರ್ಮೇಂದ್ರ ಚತುರ್ ಅವರು ಹುದ್ದೆಯಿಂದ ನಿರ್ಗಮಿಸಿರುವ ಮಾಹಿತಿ ಲಭ್ಯವಾಗಿದೆ. ಆದರೆ ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಲು ಟ್ವಿಟರ್ ನಿರಾಕರಿಸಿದೆ.
ಹೊಸ ಐಟಿ ಕಾನೂನು ಪಾಲನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ-ಟ್ವಿಟರ್ ಮಧ್ಯೆ ನಡೆಯುತ್ತಿರುವ ತಿಕ್ಕಾಟದ ಮಧ್ಯೆಈ ಬೆಳವಣಿಗೆ ನಡೆದಿದೆ.
ದೇಶದ ಹೊಸ ಕಾನೂನು ಪಾಲನೆಗೆ ಉದ್ದೇಶಪೂರ್ವಕವಾಗಿ ಟ್ವಿಟರ್ ನಿರಾಕರಿಸುತ್ತಿದೆ ಹಾಗೂ ನಿರ್ಲಕ್ಷ್ಯಿಸುತ್ತಿದೆ ಎಂದು ಕೇಂದ್ರ ಸರ್ಕಾರ ಸಾಮಾಜಿಕ ಜಾಲತಾಣ ಸಂಸ್ಥೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತ್ತು.
ಸರ್ಕಾರದ ಮಾಹಿತಿಯ ಪ್ರಕಾರ ಟ್ವಿಟರ್ ನ ಮೊಂಡಾಟಕ್ಕೆ ಈಗ ಅದು ಕಾನೂನಿನ ರಕ್ಷಣೆಯನ್ನು ಕಳೆದುಕೊಂಡಿದ್ದು, ಟ್ವಿಟರ್ ನಲ್ಲಿ ಅದರ ಚಂದಾದಾರರು ಪೋಸ್ಟ್ ಮಾಡುವ ಅಂಶಗಳಿಗೆ ಕಾನೂನಾತ್ಮಕವಾಗಿ ಸಂಸ್ಥೆಯೇ ಹೊಣೆಯಾಗಿರಲಿದೆ.

ಪ್ರಮುಖ ಸುದ್ದಿ :-   ಮುಂಬೈ ನಾರ್ತ್ ಸೆಂಟ್ರಲ್ ಕ್ಷೇತ್ರದಿಂದ ಮುಂಬೈ 26/11 ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ವಾದಿಸಿದ್ದ ಉಜ್ವಲ್ ನಿಕಮ್ ಕಣಕ್ಕಿಳಿಸಿದ ಬಿಜೆಪಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement