ಬೆಂಗಳೂರು: ಜುಲೈ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, “ಜುಲೈ ಎರಡನೇ ವಾರದಲ್ಲಿ ಪ್ರಕಟವಾಗುವ ಫಲಿತಾಂಶದಿಂದ ಸಮಾಧಾನ ಇಲ್ಲದೇ ಇದ್ದರೆ, ಅಂಥ ವಿದ್ಯಾರ್ಥಿಗಳಿಗೆ ಹೆಚ್ಚು ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.
ಸ್ಥಗಿತಗೊಂಡಿದ್ದ 2020-21ನೇ ಸಾಲಿನ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಗೆ ಹೊಸ ಅಧಿಸೂಚನೆ ಜೂನ್ 30 ಪ್ರಕಟವಾಗಲಿದ್ದು, ಅಂದೇ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ” ಎಂದು ತಿಳಿಸಿದ್ದಾರೆ.
ಈ ಬಾರಿ ವಲಯ, ಹೆಚ್ಚುವರಿ ವರ್ಗಾವಣೆ ಇರುವುದಿಲ್ಲ. ಈಗಾಗಲೇ 75 ಸಾವಿರ ಅರ್ಜಿ ಸ್ವೀಕಾರ ಆಗಿದೆ. ಅವರಿಗೆ ಮೊದಲು ಕೌನ್ಸೆಲಿಂಗ್ ಪ್ರಕಿಯೆ ಆರಂಭವಾಗಲಿದೆ. ಹೊಸತಾಗಿ ಅರ್ಜಿ ಸಲ್ಲಿಸಿದವರಿಗೆ ಎರಡನೇ ಹಂತದಲ್ಲಿ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ” ಎಂದು ಹೇಳಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ