ಮಹತ್ವದ ಸುದ್ದಿ.. ಕರ್ನಾಟಕದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ದಿನಾಂಕ ಪ್ರಕಟಿಸಿದ ಸರ್ಕಾರ..!

ಬೆಂಗಳೂರು: ಕೊರೊನಾ ಎರಡನೇ ಅಲೆ ನಡುವೆಯೇ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸರ್ಕಾರ ದಿನಾಂಕ ನಿಗದಿ ಮಾಡಿದ್ದು, ಜುಲೈ 19 ಹಾಗೂ ಜುಲೈ 22ರಂದು ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸೋಮವಾರ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು
ಜುಲೈ 19ರಂದು ಕೋರ್ ವಿಷಯಗಳ ಪರೀಕ್ಷೆ ನಡೆಯಲಿದ್ದು, ಜುಲೈ 19 ಸೋಮವಾರದಂದು ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಬೆಳಗ್ಗೆ 10.30ರಿಂದ 1.30ರ ತನಕ ಹಾಗೂ ಭಾಷಾ ವಿಷಯಗಳ ಪರೀಕ್ಷೆ 22ರಂದು ಗುರುವಾರ ಬೆಳಗ್ಗೆ 10.30ರಿಂದ 1.30ರ ಪರೀಕ್ಷೆ ನಡೆಯಲಿದೆ ಎಂದು ಹೇಳಿದರು. ಈ ಬಾರಿ ಪರೀಕ್ಷೆಗೆ 8,76,581 ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ. 73,066 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.ಜೂನ್ 30ರಂದು ಹಾಲ್ ಟಿಕೆಟ್ ಬಿಡುಗಡೆ ಮಾಡಲಾಗುತ್ತದೆ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು 8:30ಕ್ಕೆ ಹಾಜರಾಗಿರಬೇಕು ಎಂದು ಮಾಹಿತಿ ನೀಡಿದರು.
ವಿಕಾಸಸೌಧದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ಹಾಗೂ ಅಧಿಕಾರಿಗಳು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಕಾರಿಗಳು, ಮುಖ್ಯ ಕಾರ್ಯನಿರ್ವಹಣಾಕಾರಿಗಳು, ಖಜಾನೆ ಅಕಾರಿಗಳು ಸೇರಿದಂತೆ ಮತ್ತಿತರರ ಜತೆ ವಿಡಿಯೋ ಕಾನರೆನ್ಸ್ ಮೂಲಕ ಮಾತನಾಡಿ ಎಸ್‍ಎಸ್‍ಎಲ್‍ಸಿ ಪರೀಕ್ಷಾ ದಿನಾಂಕವನ್ನು ಅಧಿಕೃತವಾಗಿ ಘೋಷಣೆ ಮಾಡಿದರು.
ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಎರಡು ದಿನ ಮಾತ್ರ ನಡೆಸಲಾಗುವುದು. ವಿದ್ಯಾರ್ಥಿಗಳಿಗೆ ಬಹು ಆಯ್ಕೆಯ ಪ್ರಶ್ನೆಗಳನ್ನು ನೀಡಲಾಗುವುದು. ಪ್ರತಿಯೊಬ್ಬರೂ ಒಎಂಆರ್ ಶೀಟಿನಲ್ಲಿ ಉತ್ತರವನ್ನು ಭರ್ತಿ ಮಾಡಬೇಕೆಂದು ಅವರು ಮನವಿ ಮಾಡಿದರು.
ಮಕ್ಕಳ ಆತ್ಮಸ್ಥೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಕೈಗೊಂಡೂ ಪರೀಕ್ಷೆ ನಡೆಸಲಾಗುವುದು ಎಂದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಗೋಕರ್ಣ : ಸಮುದ್ರದ ಅಲೆಗೆ ಸಿಲುಕಿದ್ದ ಮೂವರು ಪ್ರವಾಸಿಗರ ರಕ್ಷಣೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement