ಕರ್ನಾಟಕದಲ್ಲಿ ಒಂದು ಲಕ್ಷಕ್ಕಿಂತ ಕಡಿಮೆಗೆ ಬಂದ ಕೊರೊನಾ ಸಕ್ರಿಯ ಪ್ರಕರಣಗಳು..

ಬೆಂಗಳೂರು: ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಮತ್ತಷ್ಟು ಇಳಿಕೆಯತ್ತ ಸಾಗುತ್ತಿದೆ.ಕಳೆದ 24 ಗಂಟೆಯಲ್ಲಿ (ಸೋಮವಾರ) ಹೊಸದಾಗಿ ರಾಜ್ಯಾದ್ಯಂತ ಹೊಸದಾಗಿ 2,576 ಜನರಿಗೆ ಕೊರೊನಾ ಸೋಂಕು ದೃಢಪಟ್ಟ ವರದಿಯಾಗಿದೆ.
ಇದೇ ಸಮಯದಲ್ಲಿ ಕೊರೊನಾ ಸೋಂಕಿನಿಂದ 93 ಜನರು ಮೃತಪಟ್ಟಿದ್ದಾರೆ.
ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸೋಂಕಿತರ ಸಂಖ್ಯೆ 28,37,206ಕ್ಕೆ ಏರಿಕೆಯಾಗಿದೆ. ಹಾಗೂ ಒಟ್ಟು 34,836 ಸೋಂಕಿತರು ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.
ಇದೇ ಸಮಯದಲ್ಲಿ 5,933 ಜನರು ಗುಣಮುಖರಾಗಿ ಅಸ್ಪತ್ತೆರಯಿಂದ ಬಿಡುಗಡೆಯಾಗಿದ್ದಾರೆ.ರಾಜ್ಯದಲ್ಲಿ ಒಟ್ಟು 27,04,755 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಈಗ 97,592 ಸಕ್ರಿಯ ಪ್ರಕರಣಗಳಿವೆ. ಅನೇಕ ದಿನಗಳ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಲಕ್ಷಕ್ಕಿಂತ ಕಡಿಮೆಗೆ ಬಂದಿದೆ.
ಬೆಂಗಳೂರು ನಗರದಲ್ಲಿ ಸೋಮವಾರ 563 ಜನರಿಗೆ ಹೊಸದಾಗಿ ಸೋಂಕು ದೃಢಪಟ್ಟ ವರದಿಯಾಗಿದೆ.
ರಾಜ್ಯದ ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

28-06-2021 HMB Kannada

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement