ಕುಮಟಾ: ಉತ್ತರಕನ್ನಡ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್‌-19  ಲಸಿಕೆ ಅಭಿಯಾನ ಆರಂಭ

ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್‌-19  ಲಸಿಕಾ ಅಭಿಯಾನ ಸೋಮವಾರದಿಂದ (ಜೂನ್‌ 28ರಿಂದ) ಆರಂಭವಾಗಿದೆ. ಇಲ್ಲಿನ ಡಾ. ಎ. ವಿ ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಸರ್ಕಾರಿ ಆಸ್ಪತ್ರೆಯ ವೈದ್ಯರಾದ ಡಾ. ಚೈತ್ರ ಪ್ರಭಾ ವಿದ್ಯಾರ್ಥಿಗಳಿಗೆ ಲಸಿಕೆಯ ಅಗತ್ಯತೆ ಕುರಿತು ಮನವರಿಕೆ ಮಾಡಿದರು .ಲಸಿಕೆ ಪಡೆಯುವುದರಿಂದ ಕೊರೊನಾ ತಡೆಗಟ್ಟುವದಷ್ಟೇ ಅಲ್ಲದೆ ಭವಿಷ್ಯದಲ್ಲಿ ವೈರಸ್ನಿಂದ ಉಂಟಾಗುವ ಅಪಾಯದಿಂದ ಪಾರಾಗಬಹುದು ಎಂದು ತಿಳಿಸಿದರು. ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ 18 ವರ್ಷ್ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಸುಮಾರು 500 ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಹಾಗೂ 30 ಜನ ಸಿಬ್ಬಂದಿಗೆ ಸೋಮವಾರ ಲಸಿಕೆ ಕೊಡಿಸುವ ಕಾರ್ಯ ನಡೆಯಲಿದೆ ಎಂದು ಪ್ರಾಚಾರ್ಯ ಡಾ. ಎಸ್. ವಿ. ಶೇನ್ವಿ ಮಾಹಿತಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ತಾಲೂಕಾ ವೈದ್ಯಾಧಿಕಾರಿ ಡಾ.ಆಜ್ಞಾ ನಾಯಕ, ಪ್ರಾಚಾರ್ಯ ಪ್ರೊ. ಎ.ನ್.ಜಿ. ಹೆಗಡೆ. ಪ್ರೊ. ಶಿವಾನಂದ ಬುಳ್ಳ, ಡಾ. ಅರವಿಂದ್ ನಾಯಕ. ಹಿರಿಯ ಅರೋಗ್ಯ ನಿರೀಕ್ಷಕ ದಿನೇಶ ನಾಯ್ಕ ಇದ್ದರು.

ಪ್ರಮುಖ ಸುದ್ದಿ :-   ವಿಧಾನಸೌಧ ಸ್ಫೋಟದ ಎಐ ವಿಡಿಯೊ ಸೃಷ್ಟಿಸಿ ಹಂಚಿಕೊಂಡ ಆರೋಪ : ಕಿಡಿಗೇಡಿ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement