ಢಾಕಾದಲ್ಲಿ ಪ್ರಬಲ ಸ್ಫೋಟ : 7 ಜನರ ಸಾವು, 400 ಜನರಿಗೆ ಗಾಯ

ಢಾಕಾ: ಬಾಂಗ್ಲಾ ರಾಜಧಾನಿ ಢಾಕಾದ ಜನನಿಬಿಡ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಿಂದ ಮೂರಂತಸ್ತಿನ ಕಟ್ಟಡ ಕುಸಿದು ಬಿದ್ದು ಏಳು ಮಂದಿ ಮೃತಪಟ್ಟಿದ್ದಾರೆ ಹಾಗೂ 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗ್ಯಾಸ್ ಸಿಲಿಂಡರ್ ಇಲ್ಲವೇ ಗ್ಯಾಸ್ ಲೈನ್ ಸ್ಫೋಟಿಸಿ ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಿರುವ ಪೊಲೀಸರು ಘಟನೆ ಹಿಂದೆ ಯಾವುದೇ ಉಗ್ರ ಸಂಘಟನೆಯ ಕೈವಾಡವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಸುಮಾರು 12 ಕ್ಕೂ ಹೆಚ್ಚು ಕಟ್ಟಡಗಳಿಗೆ ಹಾನಿಯಾಗಿದೆ. ಏಳು ಕಟ್ಟಡಗಳು ಹಾಗೂ ಎರಡು ಬಸ್‍ಗಳಿಗೆ ಸಂಪೂರ್ಣ ಹಾನಿಯಾಗಿದೆ. ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ ಹಾಗೂ 400ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ಅವರಲ್ಲಿ ಐವತ್ತು ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಸ್ಫೋಟದ ತೀವ್ರತೆಗೆ ಕಟ್ಟಡಗಳಿಗೆ ಅಳವಡಿಸಲಾಗಿದ್ದ ಗಾಜಿನ ಚೂರುಗಳು ಗಾಳಿಯಲ್ಲಿ ಸಿಡಿದಿದ್ದರಿಂದ ಹೆಚ್ಚಿನಜನರಿಗೆ ಹಾನಿಯಾಗಿದೆ ಎನ್ನಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement