ಜೂ.30ರಿಂದ ಬಂಡೀಪುರ ಸಫಾರಿ ಪುನರಾರಂಭ

posted in: ರಾಜ್ಯ | 0

ಗುಂಡ್ಲುಪೇಟೆ (ಚಾಮರಾಜನಗರ): ಬಂಡೀಪುರ ಹುಲಿಯೋಜನೆ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮ ಚಟುವಟಿಕೆ ಸೇರಿ ಸಫಾರಿ ಜೂ.30ರಿಂದ ಪುನರಾರಂಭಗೊಳ್ಳಲಿದೆ.
ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್‌-19 ಹತೋಟಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಪ್ರವರ್ಗ-1 ರ ಅಡಿಯಲ್ಲಿ ಘೋಷ‌ಣೆ ಮಾಡಿ ಲಾಕ್‌ಡೌನ್‌ ತೆರವುಗೊಳಿಸುವ ಸರ್ಕಾರದ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗುತ್ತಿದೆ.
ತಕ್ಷಣಕ್ಕೆ ಸಫಾರಿಗೆ ಹೋಗುವ ವ್ಯವಸ್ಥೆ ಆಗಲಿದೆ. ಜು.15 ರಿಂದ ಎಲ್ಲಾ ರೀತಿಯ ಪ್ರವಾಸೋದ್ಯಮ ಚಟುವಟಿಕೆಗಳು ಆನ್‌ಲೈನ್‌ ನಲ್ಲಿ ಲಭ್ಯವಿರುತ್ತವೆ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಎಸ್‌.ಆರ್‌.ನಟೇಶ್‌ ತಿಳಿಸಿದ್ದಾರೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ