ಕರ್ನಾಟಕದಲ್ಲಿ ಮಂಗಳವಾರ ಒಂದೇ ದಿನ 3,222 ಜನರಿಗೆ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 4,000ಕ್ಕಿಂತ ಇಳಿಮುಖವಾಗಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 3222 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 93 ಮಂದಿ ಮೃತಪಟ್ಟಿದ್ದು, 14724 ಸೋಂಕಿತರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಕೊವಿಡ್-19 ಹೊಸ ಪ್ರಕರಣಗಳ ಶೇಕಡಾವಾರು ಪ್ರಮಾಣ 2.54ರಷ್ಟಿದ್ದು, ಸಾವಿನ ಪ್ರಮಾಣ ಶೇ.2.88ರಷ್ಟಿದೆ.
ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 28,40,428ಕ್ಕೆ ಏರಿಕೆಯಾಗಿದೆ. ಈವರೆಗೂ 27,19,479 ಸೋಂಕಿತರು ಗುಣಮುಖರಾಗಿದ್ದು. 34929 ಮಂದಿ ಮೃತಪಟ್ಟಿದ್ದಾರೆ.ರಾಜ್ಯದಲ್ಲಿ 85,997 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

29-06-2021 HMB Kannada

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement