ಜಮ್ಮು ಐಎಎಫ್ ವಾಯು ನೆಲೆಗೆ ದ್ರೋನ್‌ ದಾಳಿ: ಎನ್‌ಐಎಗೆ ತನಿಖೆ ಹೊಣೆ

ಶ್ರೀನಗರ್: ಭಾರತೀಯ ವಾಯುಸೇನೆ ನಿಯಂತ್ರಣದ ಜಮ್ಮು ವಾಯುನೆಲೆ ಮೇಲೆ ನಡೆದ ಡ್ರೋನ್ ದಾಳಿ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ತಂಡ(ಎನ್‌ಐಎ)ಕ್ಕೆ ವಹಿಸಿದೆ.
ಜೂನ್ 27ರ ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಐದು ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದ್ದು, ಇಬ್ಬರು ಭಾರತೀಯ ಸೇನಾ ಪಡೆ ಸಿಬ್ಬಂದಿ ಗಾಯಗೊಂಡಿದ್ದರು. ಬೆಳಗಿನ ಜಾವ 1.37ರ ಹೊತ್ತಿಗೆ ಮೊದಲ ಸ್ಫೋಟ ಸಂಭವಿಸಿದ್ದು, ಕಟ್ಟಡದ ತಾಂತ್ರಿಕ ವಿಭಾಗದಲ್ಲಿನ ಮೇಲ್ಛಾವಣಿಗೆ ಹಾನಿಯಾಗಿದೆ. ಬೆಳಗಿನ ಜಾವ 1.43ರ ಹೊತ್ತಿಗೆ ಒಂದೇ ಕಿಲೋ ಮೀಟರ್ ದೂರದಲ್ಲಿ ಇರುವ ಬಯಲು ಪ್ರದೇಶದಲ್ಲಿ ಎರಡನೇ ಸ್ಫೋಟ ಸಂಭವಿಸಿತ್ತು.
ಭಾರತೀಯ ವಾಯು ನೆಲೆ ನಿಯಂತ್ರಣದ ಜಮ್ಮು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಎರಡು ಲಘುಸ್ಫೋಟವು ಉಗ್ರರ ದಾಳಿಯಾಗಿದೆ,” ಎಂದು ಜಮ್ಮು ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಸ್ಪಷ್ಟಪಡಸಿದ್ದರು. ಮೊದಲ ಬಾರಿಗೆ ಉಗ್ರರ ದಾಳಿಗೆ ಡ್ರೋನ್ ಬಳಕೆ ಆಗಿರುವುದು ಗೊತ್ತಾಗಿದ್ದು, ಈ ಡ್ರೋನ್ ದಾಳಿ ಹಿಂದೆ ಪಾಕಿಸ್ತಾನ ಉಗ್ರ ಸಂಘಟನೆ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಜಮ್ಮು ವಿವಾಯುನೆಲೆಯಲ್ಲಿ ನಡೆದ ಸ್ಫೋಟವು ಭಾರತೀಯ ಭದ್ರತೆಗೊಂದು ಸವಾಲು ಎನ್ನುವಂತಿದೆ. ಡ್ರೋನ್ ಮೂಲಕ ಸ್ಫೋಟಕವನ್ನು ಭಾರತೀಯ ವಾಯುನೆಲೆ ನಿಯಂತ್ರಣದ ವಿಮಾನ ನಿಲ್ದಾಣದಲ್ಲಿ ಹಾಕಲಾಗುತ್ತದೆ ಎಂದರೆ ನಮ್ಮ ಭದ್ರತಾ ವ್ಯವಸ್ಥೆ ಬಗ್ಗೆ ಮರುಪರಿಶೀಲನೆ ಮಾಡಿಕೊಳ್ಳಬೇಕಾಗುತ್ತದೆ,” ಎಂದು ನಿವೃತ್ತ ಲೆಫ್ಟಿನೆಂಟ್ ಜನರಲ್ ದೀಪೇಂದ್ರ ಸಿಂಗ್ ಹೂಡಾ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement