ಸೆಂಟ್ರಲ್ ವಿಸ್ಟಾ ಯೋಜನೆಗೆ ತಡೆ ನೀಡಲು ಸುಪ್ರೀಂ ನಕಾರ: ಮೇಲ್ಮನವಿ ಅರ್ಜಿ ವಜಾ

ನವದೆಹಲಿ: ಕೊರೊನಾ ಸಂಕಷ್ಟ ಕಾಲದಲ್ಲಿ ನಿರ್ಮಾಣಗೊಳ್ಳುತ್ತಿರುವ ಸೆಂಟ್ರಲ್ ವಿಸ್ಟಾ ಯೋಜನೆಗೆ ತಡೆ ನೀಡಲು ನಿರಾಕರಿಸಿರುವ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಸೆಂಟ್ರಲ್ ವಿಸ್ಟಾ ಯೋಜನೆ ಸ್ಥಗಿತಕ್ಕೆ ತಡೆ ನೀಡಲು ನಿರಾಕರಿಸಿರುವ ದೆಹಲಿ ಹೈಕೋರ್ಟ್ ತೀರ್ಪಿನಲ್ಲಿ ಮೂಗು ತೂರಿಸಲು ಸಾಧ್ಯವಿಲ್ಲ ಎಂದು ಆಭಿಪ್ರಾಯಪಟ್ಟಿರುವ ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವೀಲ್ಕರ್, ದಿನೇಶ್ ಮಹೇಶ್ವರಿ ಹಾಗೂ ಅನಿರುದ್ಧ ಬೋಸ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ.
ಸೆಂಟ್ರಲ್ ವಿಸ್ಟಾ ಯೋಜನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ನ್ಯಾಯಸಮ್ಮತವಲ್ಲ ಎಂದು ಅಭಿಪ್ರಾಯಪಟ್ಟಿರುವ ದೆಹಲಿ ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಸಾಧ್ಯವಿಲ್ಲ. ಅದೇ ರೀತಿ ದೂರುದಾರರಿಗೆ ವಿಧಿಸಲಾಗಿರುವ ಒಂದು ಲಕ್ಷ ರೂ.ಗಳ ದಂಡದ ವಿಚಾರದಲ್ಲೂ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಚುನಾವಣಾ ಆಯೋಗದಿಂದ 8,889 ಕೋಟಿ ರೂ.ಮೌಲ್ಯದ ವಸ್ತುಗಳ ವಶ

ನಿಮ್ಮ ಕಾಮೆಂಟ್ ಬರೆಯಿರಿ

advertisement