ಪತ್ನಿ ಕೊರೊನಾದಿಂದ ಸಾವು: ನೋವಿನಲ್ಲಿ ಪತಿ, ಇಬ್ಬರು ಮಕ್ಕಳು ಆತ್ಮಹತ್ಯೆ

ಬೆಂಗಳೂರು: ಕೊರೊನಾ ಮಾಹಾಮಾರಿ ಕುಟುಂಬಗಳನ್ನೇ ಆಹುತಿ ಪಡೆಯುತ್ತಿದ್ದು, ರಾಜ್ಯದಲ್ಲಿ ಕೋವಿಡ್ ಹಾಗೂ ಕೋವಿಡ್ ನಂತರದ ಸಾವಿನ ಸರಣಿ ಬೇರೆ ಬೇರೆ ರೂಪದಲ್ಲಿ ಮುಂದುವರಿದಿದೆ. ಇಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದ ವದಿಯಾಗಿದೆ.
ಕೊರೊನಾ ಸೋಂಕಿಗೆ ಪತ್ನಿ ಮೃತಪಟ್ಟಿದ್ದರಿಂದ ಮನನೊಂದು ಪತಿ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆನೇಕಲ್ ನಲ್ಲಿ ನಡೆದಿದೆ.
ಮೃತರನ್ನು ನಾಗರಾಜ್ (45) ಹಾಗೂ ಮಕ್ಕಳಾದ ಕೀರ್ತಿ (18), ಮೋನಿಷಾ (14) ಎಂದು ಗುರುತಿಸಲಾಗಿದೆ. ಕೆಲ ದಿನಗಳ ಹಿಂದೆ ನಾಗರಾಜ್ ಪತ್ನಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಅಮ್ಮನ ಅಗಲಿಕೆಯಿಂದ ಮಕ್ಕಳಿಬ್ಬರು ಮಾನಸಿಕವಾಗಿ ನೊಂದಿದ್ದರು. ನಾಗರಾಜ್ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದೀಗ ತಂದೆ ಹಾಗೂ ಇಬ್ಬರು ಹೆಣ್ಣು ಮಕ್ಕಳು ನೇಣಿಗೆ ಕೊರಳೊಡ್ಡಿದ್ದಾರೆ.ಮಂಗಳವಾರ ರಾತ್ರಿ ಮನೆಯಲ್ಲಿಯೇ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅತ್ತಿಬೆಲೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement