ಕರ್ನಾಟಕದಲ್ಲಿ ಬುಧವಾರ ಕೊರೊನಾ ಸಾವಿನ ಸಂಖ್ಯೆ ಕೊಂಚ ಹೆಚ್ಚಳ..

ಬೆಂಗಳೂರು:ರಾಜ್ಯದಲ್ಲಿ ಬುಧವಾರ ಹೊಸದಾಗಿ 3,382 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 111 ಮಂದಿ ಮೃತಪಟ್ಟಿದ್ದಾರೆ .
ಇದೇ ಸಮಸಯದಲ್ಲಿ 12, 763 ಜನರು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ಸೋಂಕು ಸೇರಿದಂತೆ ಒಟ್ಟಾರೆಯಾಗಿ ಸೋಂಕಿನ ಸಂಖ್ಯೆ 28,43,810 ಕ್ಕೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 35,040ಕ್ಕೆ ಏರಿಕೆಯಾಗಿದೆ. ಚೇತರಿಸಿಕೊಂಡವರ ಸಂಖ್ಯೆ 27,32,242 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಗಳ ಸಂಖ್ಯೆ 76,505 ಕ್ಕೆ ಕುಸಿದಿದೆ.
ಬೆಂಗಳೂರಿನಲ್ಲಿ ಮತ್ತೆ ಸೋಂಕು ಹೆಚ್ಚಳವಾಗಿದೆ ಇಂದು 813 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 9543 ಮಂದಿ ಚೇತರಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,71,112 ಮಂದಿಗೆ ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಇಲ್ಲಿಯ ತನಕ 3,42,69,727 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

30-06-2021 HMB Kannada

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement