ರಮೇಶ್ ಜಾರಕಿಹೊಳಿ ಅವರ ಜತೆ ನಾವಿದ್ದೇವೆ : ಸಚಿವ ಬೈರತಿ

ಹುಬ್ಬಳ್ಳಿ: ರಮೇಶ್ ಜಾರಕಿಹೊಳಿ ಅವರ ಜತೆ ನಾವಿದ್ದೇವೆ ಎಂದು ಸಚಿವ ಬೈರತಿ ಬಸವರಾಜ ಹೇಳಿದರು.
ಬುಧವಾರ ಹುಬ್ಬಳ್ಳಿ ಧಾರವಾಡ ನಗರ ಪ್ರದಕ್ಷಿಣೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ಯಾವ ಉದ್ದೇಶದಿಂದ ರಾಜೀನಾಮೆ ವಿಚಾರ ಮಾತನಾಡಿದ್ದಾರೆ ಎಂಬುದು ಗೊತ್ತಿಲ್ಲ. ಅವರ ಜತೆ ನಾವಿದ್ದೇವೆ. ಸಣ್ಣಪುಟ್ಟ ತೊಂದರೆಗಳಾಗಿವೆ. ಅವು ಬಗೆಹರಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಅವರು.
ಎಲ್ಲ ಸಮಸ್ಯೆಗಳೂ ಸದ್ಯದಲ್ಲೇ ಬಗೆಹರಿಲಿವೆ. ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಕರಣದ ಬಗ್ಗೆ ಎಸ್‍ಐಟಿಯಲ್ಲಿ ತನಿಖೆ ನಡೆಯುತ್ತಿದೆ. ಏನು ತೀರ್ಮಾನ ಬರುತ್ತದೋ ನೋಡೋಣ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ನಾನು ಆರನೇ ಬಾರಿಗೆ ಹುಬ್ಬಳ್ಳಿ ಧಾರವಾಡಕ್ಕೆ ಬರುತ್ತಿದ್ದೇನೆ. ಎಲ್ಲೆಲ್ಲಿ ಕೆಲಸ ನಿಧಾನಗತಿಯಲ್ಲಿ ಸಾಗುತ್ತಿದೆಯೋ ಅಲ್ಲಿ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ.ಶೇ.25 ರಿಂದ 30ರಷ್ಟು ಕಾಮಗಾರಿ ಇನ್ನೂ ಬಾಗಿ ಇದೆ. ಪಾಲಿಕೆಯಿಂದ 240 ಕೋಟಿ ರೂ. ಪ್ರಸ್ತಾವನೆ ಕೊಟ್ಟಿದ್ದಾರೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಹಣ ಬಿಡುಗಡೆ ಮಾಡುತ್ತೇನೆ. ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳು ರಾಜ್ಯದ ಅತ್ಯುತ್ತಮ ನಗರಗಳಾಗಿ ಹೊರಹೊಮ್ಮಲಿವೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement