ಜಿಎಸ್ಟಿ ಯಶಸ್ಸಿಗೆ ತೆರಿಗೆ ಸಲಹೆಗಾರರ ಕೊಡುಗೆ ಅಪಾರ: ಬೊಮ್ಮಾಯಿ

ಹುಬ್ಬಳ್ಳಿ: ಸರಕು ಮತ್ತು ಸೇವಾ ತೆರಿಗೆ ( GST )ವ್ಯವಸ್ಥೆ ದೇಶದಲ್ಲಿ ಯಶಸ್ವಿಯಾಗಲು ತೆರಿಗೆ ಸಲಹೆಗಾರರ ಕೊಡುಗೆ ಅಪಾರವಾಗಿದೆ ಎಂದು ಜಿಎಸ್‌ಟಿ ಮಂಡಳಿಯ ಕರ್ನಾಟಕದ ಪ್ರತಿನಿಧಿ, ಗೃಹ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.
ಗುರುವಾರ ಕರ್ನಾಟಕ ರಾಜ್ಯ ತೆರಿಗೆ ಸಲಹೆಗಾರರ ಸಂಘ ಆಯೋಜಿಸಿದ್ದ ನಾಲ್ಕನೇ ವರ್ಷದ ಜಿಎಸ್‌ಟಿ ದಿನದ ಅಂಗವಾಗಿ ಆಯೋಜಿಸಿದ್ದ ಸಮಾರಂಭವನ್ನು ವರ್ಚುವಲ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆ ಬಗ್ಗೆ ಹತ್ತು ವರ್ಷಗಳ ಕಾಲ ಚರ್ಚೆಯಾಗಿದೆ. ಇಷ್ಟು ವರ್ಷಗಳ ಸುದೀರ್ಘ ಚರ್ಚೆಯ ನಂತರ ಜಿಎಸ್‌ಟಿ ಜಾರಿಯಾಗಿದೆ. ಒಂದು ರಾಷ್ಟ್ರ ಒಂದು ತೆರಿಗೆ ಪರಿಕಲ್ಪನೆಯ ಜತೆ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಹಲವಾರು ವೈರುಧ್ಯ ಮತ್ತು ವೈವಿಧ್ಯತೆ ರಾಜ್ಯಗಳನ್ನು ಒಗ್ಗೂಡಿಸಿಕೊಂಡು ಹೋಗುವುದು ಬಹುದೊಡ್ಡ ಕೆಲಸ. ಈ ದೊಡ್ಡ ಕೆಲಸದ ಹಿಂದಿರುವ ಇಂಜಿನ್ ಎಂದರೆ ಪ್ರಧಾನಿ ನರೇಂದ್ರ ಮೋದಿ ಎಂದು ಅವರು ಬಣ್ಣಿಸಿದರು.
ದೇಶದಲ್ಲಿ ಜಿಎಸ್ಟಿ ಜಾರಿಯಾದಾಗ ಹಳೇ ಪದ್ಧತಿಯಿಂದ ಹೊಸ ಪದ್ಧತಿಗೆ ಹೊಸ ಪದ್ಧತಿಗೆ ತಮ್ಮನ್ನು ತಾವು ಪರಿವರ್ತನೆ ಗೊಳಿಸಿಕೊಂಡವರು ಎಂದರೆ ತೆರಿಗೆ ಸಲಹೆಗಾರರು. ಅವರೇ ಹೊಸ ತೆರಿಗೆ ಪದ್ಧತಿಯನ್ನು ಅನುಷ್ಠಾನಕ್ಕೆ ತಂದವರು. ಜನರಲ್ಲಿ ಗೊಂದಲ ಸೃಷ್ಟಿಯಾಗದಂತೆ ಮುತುವರ್ಜಿ ವಹಿಸಿದರು. ಈ ಕಾರಣದಿಂದಾಗಿ ದೇಶದಲ್ಲಿ ಇಂದು ಜಿಎಸ್ಟಿ ತೆರಿಗೆ ವ್ಯವಸ್ಥೆ ನಾಲ್ಕು ವರ್ಷಗಳನ್ನು ಪೂರೈಸಿದೆ. ನಮ್ಮ ಮುಂದೆ ಮುಂದಿನ 40 ವರ್ಷಗಳಲ್ಲಿ ತೆರಿಗೆ ವ್ಯವಸ್ಥೆಯಲ್ಲಿ ಇನ್ನಷ್ಟು ಸರಳಿಕರಣ ಮಾಡಬೇಕಾದದ್ದು ಅಗತ್ಯವಾಗಿದೆ. ಒಟ್ಟಾರೆ ದೇಶಕಟ್ಟುವ ಕೆಲಸದಲ್ಲಿ ಹಾಗೂ ದೇಶದ ಅಭಿವೃದ್ಧಿಯಲ್ಲಿ ತೆರಿಗೆ ಸಲಹೆಗಾರರು ನಿರ್ವಹಿಸುವ ಪಾತ್ರ ಬಹುಮುಖ್ಯವಾಗಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಪ್ರಮುಖ ಸುದ್ದಿ :-   ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ 10 ಹಳದಿ ಅನಕೊಂಡ ಹಾವುಗಳು ವಶಕ್ಕೆ, ಓರ್ವನ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement