ಮುಂಬರುವ ವಿಧಾನ ಮಂಡಲದ ಅಧಿವೇಶನ ಬೆಳಗಾವಿಯಲ್ಲಿ ನಡೆಸಿ: ಸಿಎಂ ಬಿಎಸ್‌ವೈಗೆ ಹೊರಟ್ಟಿ ಪತ್ರ

ಹುಬ್ಬಳ್ಳಿ; ಮುಂಬರುವ ವಿಧಾನ ಪಂಡಳದ ಅಧೀವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಬೇಕು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಪ್ರಾದೇಶಿಕ ಅಸಮತೋಲನ ನಿವಾರಣೆ ದೃಷ್ಟಿಯಿಂದ ಪ್ರತಿವರ್ಷದ ಒಂದು ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸುವುದು ಸೂಕ್ತ ಎನ್ನುವ ಈ ಮೊದಲು ಕೈಗೊಂಡ ನಿರ್ಣಯಕ್ಕೆ ಬದ್ಧರಾಗಿ ಮುಂಬರುವ ಅಧೀವೇಶವನನು ಬೆಳಗಾವಿಯ ಸುವರ್ಣ ಸೌಧಲ್ಲಿ ನಡೆಸಬೇಕು ಎಂದು ಪತ್ರದಲ್ಲಿ ಹೇಳಿದ್ದಾರೆ.
ಜಾಗತಿಕ ಮಹಾಮಾರಿ ಕೊರೊದಿಂದಾಗಿ ರಾಜ್ಯವೂ ಸೇರಿದಂತೆ ಜಗತ್ತಿನ ಹಲವಾರು ದೇಶಗಳು ತಲ್ಲಣಗೊಂಡು ಲಾಕ್‍ಡೌನ್ ನಂತಹ ಹಲವು ಕಠಿಣ ಕ್ರಮಗಳ ಹಿನ್ನೆಲೆಯಲ್ಲಿ ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಕೋವಿಡ್‌ ಅಬ್ಬರ ಕಡಿಮೆಯಾಗುತ್ತಿರುವುದು ಸಮಾಧಾನ ತಂದಿದೆ. ಕೋವಿಡ್ ಕಾಯಿಲೆ ಇದೀಗ ನಿಯಂತ್ರಣದಲ್ಲಿದ್ದು, ಬಹುತೇಕ ಜನರು ಸರ್ಕಾರದ ನಿಯಮಗಳನ್ನು ಪಾಲಿಸುವುದರ ಜೊತೆಗೆ ತಮ್ಮ ದೈನಂದಿನ ಚಟುವಟಿಕೆಗಳಿಗೆ ಮರಳುತ್ತಿದ್ದಾರೆ. ಈ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಮಹತ್ತರ ಘಟ್ಟವಾಗಿರುವ ವಿಧಾನ ಮಂಡಲದ ಅಧಿವೇಶನದ ಕುರಿತು ಪ್ರಸ್ತಾಪಿಸಲು ಇಚ್ಛಿಸುತ್ತೇನೆ ಎಂದು ಹೊರಟ್ಟಿ ತಿಳಿಸಿದ್ದಾರೆ.
ಪ್ರತಿ ವರ್ಷದ ಜೂನ್/ಜುಲೈ ತಿಂಗಳಿನಲ್ಲಿ ವಾಡಿಕೆಯಂತೆ ಮುಂಗಾರು ಅಧಿವೇಶನ ನಡೆಸಲಾಗುತ್ತದೆ. ಆದರೆ ಈ ಬಾರಿ ಕೋವಿಡ್‍ ಕಾರಣದಿಂದ ಅಧಿವೇಶನ ನಡೆಸುವ ಬಗ್ಗೆ ಇದುವರೆಗೂ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಹಾಗೆಯೇ ಕಳೆದ 2018ರ ನಂತರ ಬೆಳಗಾವಿಯ ಸುವರ್ಣ ಸೌಧದಲ್ಲಿಯೂ ಯಾವುದೇ ಅಧಿವೇಶನ ನಡೆದಿಲ್ಲ ಎನ್ನುವುದು ತಮ್ಮ ಗಮನದಲ್ಲಿದೆಯೆಂದು ನಾನು ಭಾವಿಸುತ್ತೇನೆ. ಹೀಗಾಗಿ ಪ್ರಾದೇಶಿಕ ಅಸಮತೋಲನ ನಿವಾರಣೆ ದೃಷ್ಟಿಯಿಂದ ಪ್ರತಿವರ್ಷದ ಒಂದು ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸುವುದು ಸೂಕ್ತ. ಜುಲೈನಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿಯೇ ಅಧಿವೇಶನ ನಡೆಸಬೇಕೆನ್ನುವುದು ಹಲವಾರು ಸದಸ್ಯರು ಹಾಗೂ ಆ ಭಾಗದ ಜನಪ್ರತಿನಿಧಿಗಳ ಒತ್ತಾಸೆಯಾಗಿದೆ. ಹೀಗಾಗಿ ಜುಲೈನಲ್ಲಿ ಬೆಳಗಾವಿಯಲ್ಲಿಯೇ ಅಧಿವೇಶನ ನಡೆಸುವಂತೆ, ತಮಗೆ ಸಲಹೆ ರೂಪದ ಒತ್ತಾಯ ಮಾಡುತ್ತೇನೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸುವ ಕುರಿತು ಮಾನ್ಯ ವಿಧಾನ ಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೊಂದಿಗೆ ಚರ್ಚಿಸಿದ್ದು, ಅವರು ಸಹ ಈ ಬಗ್ಗೆ ತಮ್ಮ ಸಹಮತ ವ್ಯಕ್ತಪಡಿಸಿದ್ದಾರೆ. ಅಲ್ಲದೇ ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕರಾದ ಮಹಂತೇಶ ಕವಟಗಿಮಠ ಈ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ತಮ್ಮ ಮಂತ್ರಿಮಂಡಲ ಸಭೆಯಲ್ಲಿ ಈ ಕುರಿತು ಚರ್ಚಿಸಿ, ಬೆಳಗಾವಿಯಲ್ಲಿಯೇ ಮುಂಬರುವ ಅಧಿವೇಶನವನ್ನು ನಡೆಸುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement