ದೈನಂದಿನ ಪ್ರಕರಣ ಇಳಿಮುಖ: ಸಕ್ರಿಯ ಪ್ರಕರಣದಲ್ಲಿ 3ನೇ ಸ್ಥಾನಕ್ಕೆ ಇಳಿದ ಕರ್ನಾಟಕ

ಬೆಂಗಳೂರು: ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದ್ದ ಕರ್ನಾಟಕ ಇದೀಗ 3 ನೇ ಸ್ಥಾನಕ್ಕೆ ಕುಸಿದಿದೆ.
ಸೋಂಕಿನ ಪ್ರಮಾಣಕ್ಕಿಂತ ಮೂರ್ನಾಲ್ಕುಪಟ್ಟು ಜನ ಚೇತರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣ ಕುಸಿತ ಕಂಡಿದೆ. ಸದ್ಯ ರಾಜ್ಯದಲ್ಲಿ 65,312 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಗುರುವಾರ ಹೊಸದಾಗಿ 3,203 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 94 ಮಂದಿ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 14,302ಮಂದಿ ಚೇತರಿಸಿಕೊಂಡಿದ್ದಾರೆ. ಗುರುವಾರ 20 ಜಿಲ್ಲೆಗಳಲ್ಲಿ 100 ಕ್ಕೂ ಕಡಿಮೆ ಸೋಂಕು ಪ್ರಕರಣ ದಾಖಲಾಗಿರುವುದು ವಿಶೇಷ.
ರಾಜ್ಯದಲ್ಲಿ ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 28,47,013 ಕ್ಕೆ ಹೆಚ್ಚಳವಾಗಿದೆ. ಮೃತಪಟ್ಟವರ ಸಂಖ್ಯೆ 35,134 ಕ್ಕೆ ಏರಿಕೆಯಾಗಿದೆ. ಚೇತರಿಸಿಕೊಂಡವರ ಸಂಖ್ಯೆ 27,46,544ಕ್ಕೆ ಏರಿಕೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ 813 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 9543 ಮಂದಿ ಚೇತರಿಸಿಕೊಂಡಿದ್ದಾರೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

01-07-2021 HMB Kannada

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement