ಧನ ಸಹಾಯದಲ್ಲಿ ಭಾರೀ ಹೆಚ್ಚಳ: ಕಟ್ಟಡ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ ಸಚಿವ ಶಿವರಾಮ ಹೆಬ್ಬಾರ..!

ಬೆಂಗಳೂರು : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಗುರುವಾರ ಕಾರ್ಮಿಕ ಕಲ್ಯಾಣ ಭವನದಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಮಂಡಳಿಯ ನಿರ್ದೇಶಕರೊಂದಿಗೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಸಭೆ ನಡೆಸಿದರು.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮಂಡಳಿಯ ವತಿಯಿಂದ ನೀಡಲಾಗುತ್ತಿರುವ ಧನ ಸಹಾಯದಲ್ಲಿ ಭಾರಿ ಏರಿಕೆ ಮಾಡುವುದರ ಮೂಲಕವಾಗಿ ಸಚಿವ ಶಿವರಾಮ ಹೆಬ್ಬಾರ್ ಅವರು ಕಾರ್ಮಿಕರಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ‌.
ಪಿಂಚಣಿ ಸೌಲಭ್ಯವನ್ನು 2000 ದಿಂದ 3 000 ರೂಪಾಯಿಗಳಿಗೆ ಏರಿಸಲಾಗಿದೆ, ಕುಟುಂಬ ಪಿಂಚಣಿಯನ್ನು 1000 ದಿಂದ 2000 ರೂಪಾಯಿ ವರೆಗೆ ಹೆಚ್ಚಿಸಲಾಯಿತು, ಹೆರಿಗೆ ಸೌಲಭ್ಯಗಳನ್ನು 20,00 ದಿಂದ 25,000 ರೂಪಾಯಿಗಳಿಗೆ ಹೆಚ್ಚಿಸಲಾಯಿತು, ಮಂಡಳಿ ವತಿಯಿಂದ ಹೆಣ್ಣು ಮಗುವಿಗೆ ನೀಡಲಾಗುತ್ತಿದ್ದ 30,000 ರೂಪಾಯಿಯನ್ನು 35,000 ರೂಪಾಯಿಗಳಿಗೆ ಏರಿಸಲಾಯಿತು, ನರ್ಸರಿ ವಾರ್ಷಿಕ ಸಹಾಯ ಧನವನ್ನು 3000 ದಿಂದ 5000 ರೂಪಾಯಿಗಳಿಗೆ ಹೆಚ್ಚಿಸಲಾಯಿತು, 1 ರಿಂದ ನಾಲ್ಕನೇ ತರಗತಿಯ ಮಕ್ಕಳಿಗೆ 3 ರಿಂದ 5 ಸಾವಿರ ,5 ರಿಂದ 8 ನೇ ತರಗತಿಯ ಮಕ್ಕಳಿಗೆ 5 ಸಾವಿರ ದಿಂದ 8 ಸಾವಿರ, 9 ರಿಂದ 10 ನೇ ತರಗತಿಯ ಮಕ್ಕಳಿಗೆ 10 ರಿಂದ 12 ಸಾವಿರ , ಪ್ರಥಮ ಪಿಯುಸಿ ಮಕ್ಕಳಿಗೆ 10,೦0೦ ದಿಂದ 15,000 , ಐಟಿಐ ಮಕ್ಕಳಿಗೆ 12,000 ರಿಂದ 20,000 , ಪದವಿ ವಿದ್ಯಾರ್ಥಿಗಳಿಗೆ 15,000 ದಿಂದ 25,000 ಹೆಚ್ಚಿಸಲಾಗಿದೆ.
ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 25,000 ರಿಂದ 40,000 ಸಾವಿರ ಏರಿಸಲಾಗಿದೆ, ಡಿಪ್ಲೊಮಾ ವಿಧ್ಯಾರ್ಥಿಗಳಿಗೆ 15,000 ರಿಂದ 20,000 ಸಾವಿರ , ಎಮ್.ಬಿ.ಬಿ.ಎಸ್ ವಿಧ್ಯಾರ್ಥಿಗಳಿಗೆ 30 ಸಾವಿರದಿಂದ 50 ಸಾವಿರ ಎಮ್.ಡಿ ವಿಧ್ಯಾರ್ಥಿಗಳಿಗೆ 45 ರಿಂದ 7೦ ಸಾವಿರ ಪಿ.ಎಚ.ಡಿ ವಿದ್ಯಾರ್ಥಿಗಳಿಗೆ 25 ರಿಂದ 50 ಸಾವಿರ ಗಳಷ್ಟು ಸಹಾಯ ಧನವನ್ನು ಹೆಚ್ಚಿಸಲಾಗಿದೆ.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

ರಾಷ್ಟ್ರೀಯ ಕಾನೂನು ಕಾಲೇಜಿನಲ್ಲಿ ಹಾಗೂ ಐಐಟಿಗಳಲ್ಲಿ ವ್ಯಾಸಂಗ ಮಾಡುವ ಕಟ್ಟಡ ಕಾರ್ಮಿಕರ ಮಕ್ಕಳ ಸಂಪೂರ್ಣ ಶೈಕ್ಷಣಿಕ ವೆಚ್ಚವನ್ನು ಮಂಡಳಿ ಭರಿಸಲಿದೆ, ಪ್ಯಾರಾ ಮೆಡಿಕಲ್ , ಬಿಎಡ್ ಕೋರ್ಸ್ ಗಳನ್ನು ಹೊಸದಾಗಿ ಸೇರಿಸಲಾಗಿದೆ, ಕಾನೂನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 30,೦0೦ ಹಾಗೂ ಇತರೆ ವೃತ್ತಿಪರ ಕೋರ್ಸ್ ಗಳಿಗೆ ಸಹಾಯ ಧನವನ್ನು ನೀಡಲಾಗುತ್ತದೆ. ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯ ಧನವನ್ನು 10,000 ದಿಂದ 20,000 ರೂಪಾಯಿಗಳಿಗೆ ಹೆಚ್ಚಿಸಲಾಯಿತು, ವಿವಾಹ ಸಹಾಯಧನವನ್ನು 50 ಸಾವಿರದಿಂದ 60 ಸಾವಿರಕ್ಕೆ ಹೆಚ್ಚಿಸಲಾಯಿತು, ಈ ಎಲ್ಲ ನೂತನ ಪರಿಷ್ಕೃತ ಸಹಾಯ ಧನವನ್ನು ಜುಲೈ1ರಿಂದ ಜಾರಿಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದ ಸುಮಾರು 8 ಲಕ್ಷಕ್ಕೂ ಅಧಿಕ ಕಾರ್ಮಿಕ ಈ ಸೌಲಭ್ಯ ಸಹಾಯವನ್ನು ಪಡೆಯಲಿದ್ದಾರೆ. ಮಂಡಳಿಯು ವಾರ್ಷಿಕವಾಗಿ ಸುಮಾರು 100 ಕೋಟಿ ರೂಪಾಯಿಗಳನ್ನು ಈ ಎಲ್ಲಾ ಯೋಜನೆಗಳಿಗೆ ವೆಚ್ಚ ಮಾಡಲಿದ್ದೆ ಎಂದು ಅಂದಾಜಿಸಲಾಗಿದೆ.
ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ.ಜಿ.ಕಲ್ಪನಾ ಹಾಗೂ ಕಾರ್ಮಿಕ ಆಯುಕ್ತರಾದ ಅಕ್ರಂ ಪಾಷಾ ಕಾರ್ಮಿಕ ಕಲ್ಯಾಣ ಮಂಡಳಿ ನಿರ್ದೇಶಕರಾದ ನಾಗನಾಥ, ಪ್ರಕಾಶ ಎಂ , ನಾಡಗೇರ್ ಹಾಗೂ ಶಿವಾನಿ ಭಟ್ಕಳ , ಆರ್ಥಿಕ ಇಲಾಖೆ ಅಧಿಕಾರಿಗಳು, ಕೇಂದ್ರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯ ಪ್ರತಿನಿಧಿಗಳು ಕಾರ್ಮಿಕ ಸಂಘಟನೆಗಳ ಪ್ರಮುಖರು ಹಾಜರಿದ್ದರು.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

3.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement