ನಟ ಜಗ್ಗೇಶ್ ಪುತ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಬೆಂಗಳೂರು: ಕನ್ನಡದ ಹಿರಿಯ ನಟ ಜಗ್ಗೇಶ್ ಪುತ್ರ ಹಾಗೂ ನಟ ಗುರುರಾಜ್ ಚಲಾಯಿಸುತ್ತಿದ್ದ ಬಿಎಂಡಬ್ಲ್ಯು ಕಾರು ಅಪಘಾತವಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಚಿಕ್ಕಬಳ್ಳಾಪುರದ ಅಗಲಗುರ್ಕಿ ಎಂಬಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಏರ್ ಬ್ಯಾಗ್ ಓಪನ್ ಆಗಿದ್ದರಿಂದ ತೀವ್ರ ಪ್ರಮಾಣದ ಗಾಯಗಳು ಮತ್ತು ಪ್ರಾಣಾಪಾಯದಿಂದ ಗುರುರಾಜ್ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಅವರ ತಲೆ ಮತ್ತು ಕಾಲಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದಾರೆ. ಕಾರು ಮರಕ್ಕೆ ಡಿಕ್ಕಿ ಹೊಡೆದ ತೀವ್ರತೆಗೆ ಮುಂಭಾಗದ ಟೈರು ಸ್ಫೋಟಗೊಂಡಿದೆ.ಗುರುರಾಜ್ ಅವರು ಹೈದರಾಬಾದ್ ಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಕಾರನ್ನು ಸ್ವತಃ ಗುರುರಾಜ್ ಡ್ರೈವ್ ಮಾಡುತ್ತಿದ್ದರು. ಅಪಘಾತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸದ್ಯಕ್ಕೆ ಗುರುರಾಜ್ ಆರೋಗ್ಯ ಸ್ಥಿತಿ ಚೆನ್ನಾಗಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement