ಕರ್ನಾಟಕದಲ್ಲಿ ಶೇ.1.92ಕ್ಕೆ ಇಳಿದ ಪಾಸಿಟಿವಿಟಿ ದರ…!

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಕೊರೊನಾ‌ ಸೋಂಕು ಮತ್ತು ಸಾವಿನ ಸಂಖ್ಯೆ ಗುರುವಾರ ಕಡಿಮೆ ದಾಖಲಾಗಿದ್ದು ಸೋಂಕಿನ ಪಾಸಿಟಿವಿ ದರ ಶೇ.1.92ಕ್ಕೆ ಕುಸಿದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ
ರಾಜ್ಯದಲ್ಲಿ ಸೋಂಕಿನ‌ ಮರಣ ಪ್ರಮಾಣ ಶೇ.2.94 ರಷ್ಟು ಇದೆ. ಸದ್ಯ ರಾಜ್ಯದಲ್ಲಿ 53,871 ಸಕ್ರಿಯ ಪ್ರಕರಣಗಳಿವೆ. ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 593 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದುದಾಖಲಾಗಿದ್ದು, 11 ಮಂದಿ ಮೃತಪಟ್ಟಿದ್ದಾರೆ.
ಒಟ್ಟಾರೆಯಾಗಿ ಸೋಂಕಿನ ಸಂಖ್ಯೆ 28,49,997 ಕ್ಕೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 35,222ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 27,60,881 ಕ್ಕೆ ಏರಿಕೆಯಾಗಿದೆ
ರಾಜ್ಯದಲ್ಲಿ ಶುಕ್ರವಾರ ಹೊಸದಾಗಿ 2,984 ಮಂದಿಯಲ್ಲಿ ಸೋಂಕು ದಾಖಲಾಗಿದೆ. 88 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 14,337 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್ನಲ್ಲಿ ಕೆಳಗೆ ಕೊಡಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ