ಗಾಜಿಪುರ ಗಡಿಯಲ್ಲಿ ಪ್ರತಿಭಟನಾ ನಿರತ ರೈತರೊಂದಿಗೆ ಘರ್ಷಣೆ ನಂತರ, ಅನಾಮಧೇಯ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ನವದೆಹಲಿ: ಗಾಜಿಪುರ ಗಡಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಅನಾಮಧೇಯ ಬಿಜೆಪಿ ನಾಯಕರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಗುರುವಾರ ಪ್ರಕರಣ ದಾಖಲಿಸಿದ್ದಾರೆ.
ಭಾರತೀಯ ಕಿಸಾನ್ ಒಕ್ಕೂಟದ ಸದಸ್ಯರು ನೀಡಿದ ದೂರಿನ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.ಗಲಭೆಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ದೂರಿನಲ್ಲಿ, ಬುಧವಾರ ಬೆಳಿಗ್ಗೆ 10.30 ರ ಸುಮಾರಿಗೆ ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಕೋಲು ಮತ್ತು ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ತಮ್ಮ ಪ್ರತಿಭಟನಾ ಸ್ಥಳಕ್ಕೆ ನುಗ್ಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಪ್ರತಿಭಟನಾ ಸ್ಥಳದಲ್ಲಿ ಬಿಜೆಪಿ ಕಾರ್ಯಕರ್ತರು / ಬೆಂಬಲಿಗರು ಡಯಾಸ್‌ ಹತ್ತಿರ ಬಂದು, ಅಲ್ಲಿ ಗದ್ದಲ ಮಾಡಲು ಪ್ರಾರಂಭಿಸಿದರು ಮತ್ತು ಪ್ರತಿಭಟನಾ ನಿರತ ರೈತರನ್ನು ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. “ಪೊಲೀಸರ ಮುಂದೆಯೇ ಅವರು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ರೈತರ ಮೇಲೆ ಹಲ್ಲೆ ನಡೆಸಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಭಾರತೀಯ ಕಿಸಾನ್ ಯೂನಿಯನ್ ಪೊಲೀಸರನ್ನು ಒತ್ತಾಯಿಸಿದೆ.

ಪ್ರಮುಖ ಸುದ್ದಿ :-   ಅಪ್ರಾಪ್ತ ವಿದ್ಯಾರ್ಥಿಗೆ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಮುಂಬೈ ಶಿಕ್ಷಕಿ...! ಆತಂಕ ನಿವಾರಕ ಮಾತ್ರೆಯನ್ನೂ ನೀಡುತ್ತಿದ್ದಳಂತೆ

ಉತ್ತರಪ್ರದೇಶದ ಗಾಜಿಯಾಬಾದ್‌ನ ಗಾಜಿಪುರ ಗಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಪ್ರತಿಭಟನಾ ನಿರತ ರೈತರ ನಡುವೆ ನಡೆದ ಘರ್ಷಣೆಯ ನಂತರ ಸುಮಾರು 200 ಅಪರಿಚಿತ ಭಾರತೀಯ ಕಿಸಾ ಒಕ್ಕೂಟದ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿದ ಒಂದು ದಿನದ ನಂತರ ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ಬಂದಿದೆ.
ಹೊಸದಾಗಿ ನೇಮಕಗೊಂಡ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಮಿತ್ ವಾಲ್ಮೀಕಿಯವರ ದೂರಿನ ಮೇರೆಗೆ ಭಾರತೀಯ ದಂಡ ಸಂಹಿತೆಯ 147, 148, 223, 352, 427 ಮತ್ತು 506 ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅವರು ತಮ್ಮ ಪೊಲೀಸ್ ದೂರನ್ನು ಕೌಶಂಬಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದಾರೆ.
ತನಗೆ “ಸ್ವಾಗತ ಮೆರವಣಿಗೆ” ಯ ಸಂದರ್ಭದಲ್ಲಿ ಬಿಕೆಯು ಕಾರ್ಮಿಕರು ವಾಹನಗಳನ್ನು ಧ್ವಂಸಗೊಳಿಸಿದ್ದಾರೆ ಮತ್ತು ಜಾತಿವಾದಿಗಳೆಂದು ಅವಮಾನ ಮಾಡಿದಿದ್ದಾರೆ ಎಂದು ವಾಲ್ಮೀಕಿ ತಮ್ಮ ದೂರಿನಲ್ಲಿ ಆರೋಪಿಸಿದರೆ, ರೈತರು ಈ ಪ್ರಸಂಗವು ಆಡಳಿತಾರೂಢ ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ. ತಮ್ಮ ಏಳು ತಿಂಗಳ ಪ್ರತಿಭಟನೆ ಹತ್ತಿಕ್ಕುವ ಬಿಜೆಪಿಯ ಪಿತೂರಿ ಎಂದು ಹೇಳಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement