ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ಧಾರವಾಡ: ಧಾರವಾಡದ ವಿದ್ಯಾಗಿರಿಯಲ್ಲಿರುವ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐಟಿಐ ಕಾಲೇಜಿನಲ್ಲಿ ದಿನಾಂಕ ೦೫.೦೭.೨೦೨೧ ರಂದು ಬೆಳಿಗ್ಗೆ ೧೦ ಗಂಟೆಗೆ ಬೆಂಗಳೂರಿನ ಎನ್.ಟಿ.ಟಿ.ಎಫ್ ಕಂಪನಿಯವರು ನೀಮ್ ಟ್ರೈನೀ ಹುದ್ದೆಗಳಿಗಾಗಿ ಕ್ಯಾಂಪಸ್ ಸಂದರ್ಶನ ಏರ್ಪಡಸಿದ್ದಾರೆ. ೧೮-೨೫ ವಯೋಮಾನದೊಳಗಿನ ಡಿಪ್ಲೋಮಾ ಅಥವಾ ಐ.ಟಿ.ಐ ಪಾಸಾದ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದು. ಆಸಕ್ತರು ಸಂದರ್ಶನಕ್ಕೆ ಹಾಜರಾಗುವಾಗ ತಮ್ಮ ಬಯೋಡೆಟಾ, ೨ ಪೋಟೊ, ಆಧಾರ ಕಾರ್ಡನ ಝರಾಕ್ಸ್‌ ಪ್ರತಿ ಹಾಗೂ ಅಂಕಪಟ್ಟಿಯ ಝರಾಕ್ಸ್‌ ಪ್ರತಿಯನ್ನು ತರಬೇಕು. ಹೆಚ್ಚಿನ ಮಾಹಿತಿ ಹಾಗೂ ಹೆಸರು ನೋಂದಾವಣೆಗಾಗಿ ೦೮೩೬-೨೪೬೨೨೦೨ ಗೆ ಕರೆಮಾಡಬಹುದಾಗಿದೆ ಎಂದು ಈ ಮೂಲಕ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ...!?

ನಿಮ್ಮ ಕಾಮೆಂಟ್ ಬರೆಯಿರಿ

advertisement