ಡಿನೋಟಿಫಿಕೇಶನ್‌: ಸಿಎಂ ಬಿಎಸ್‌ವೈ ವಿರುದ್ಧ ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್‌ ತಿರಸ್ಕರಿಸಿದ ವಿಶೇಷಕೋರ್ಟ್‌, ತನಿಖೆಗೆ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಮತ್ತೊಮ್ಮೆ ಡಿನೋಟಿಫಿಕೇಶನ್ ಭೂತದ ಕಾಡ ಶುರುವಾಗಿದೆ. ಬೆಳ್ಳಂದೂರು ಡೀನೋಟಿಫಿಕೇಶನ್ ಪ್ರಕರಣದ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿದೆ. ವಾಸುದೇವ ರೆಡ್ಡಿ ಎಂಬುವವರು ಸಲ್ಲಿಸಿದ ದೂರನ್ನು ಪರಿಗಣಿಸಿ ವಿಶೇಷ ಕೋರ್ಟ್ ಈ ಆದೇಶ ಮಾಡಿದೆ.
ಲೋಕಾಯುಕ್ತ ಪೊಲೀಸರು ಈ ಹಿಂದೆ ಈ ಪ್ರಕರಣದಲ್ಲಿ ಬಿ ರಿಪೋರ್ಟ್ ನೀಡಿದ್ದರು.ಈಗ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ತಿರಸ್ಕರಿಸಿ ಯಾವುದೇ ವಿಳಂಬ ಇಲ್ಲದೇ ತನಿಖೆ ನಡೆಸುವಂತೆ ಲೋಕಾಯುಕ್ತ ಡಿವೈಎಸ್​ಪಿಗೆ ಸೂಚಿಸಿದೆ.
2000-01ರಲ್ಲಿ ಐಟಿ ಪಾರ್ಕ್ ಗೆಂದು ಕೆಐಎಡಿಬಿ ಬೆಳ್ಳಂದೂರು, ದೇವರ ಬೀಸನಹಳ್ಳಿಯಲ್ಲಿ ಭೂಸ್ವಾಧೀನ ಮಾಡಿತ್ತು. ಬಿಜೆಪಿ – ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಯಡಿಯೂರಪ್ಪ ಅವರು ಉಪ ಮುಖ್ಯಮಂತ್ರಿ ಆಗಿದ್ದಾಗ 4.30 ಎಕರೆ ಜಾಗವನ್ನು ಡೀನೋಟಿಫೈ ಮಾಡಿದ್ದರು.
2013ರಲ್ಲಿ ವಾಸುದೇವ ರೆಡ್ಡಿ ಅವರು ಲೋಕಾಯುಕ್ತದಲ್ಲಿ ಖಾಸಗಿ ದೂರು ನೀಡಿದ್ದರು. ಆದರೆ, 2021, ಜನವರಿಯಲ್ಲಿ ಲೋಕಾಯುಕ್ತ ಪೊಲೀಸರು ವಾಸುದೇವ ರೆಡ್ಡಿ ಸಲ್ಲಿಸಿದ ದೂರಿನಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಈಗ ಜನಪ್ರತಿನಿಧಿಗಳ ಸ್ಪೆಷಲ್ ಕೋರ್ಟ್ ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ತಿರಸ್ಕರಿಸಿ ತನಿಖೆಗೆ ಆದೇಶಿಸಿದೆ.

ಪ್ರಮುಖ ಸುದ್ದಿ :-   ಬೆಳಗಾವಿ: ಹಾಡಹಗಲೇ ಸ್ಕ್ರೂ ಡ್ರೈವರ್​ನಿಂದ ಚುಚ್ಚಿ ಯುವಕನ ಕೊಲೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement