ಮೇಕೆದಾಟು ಯೋಜನೆಗೆ ಸಹಕಾರ ಕೋರಿ ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಬಿಎಸ್​ವೈ ಪತ್ರ

ಬೆಂಗಳೂರು: ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ಈಗಾಗಲೇ ಎನ್​ಜಿಟಿ ಹಸಿರು ನಿಶಾನೆ ತೋರಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ತಮಿಳುನಾಡು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಸುಪ್ರೀಂ ಕೋರ್ಟ್​ ಆದೇಶದ ಅನ್ವಯ ಈ ಯೋಜನೆ ಆರಂಭಿಸಿದ್ದು, ಈ ಯೋಜನೆಗೆ ಸಹಕಾರ ನೀಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್​ ಅವರಿಗೆ ಪತ್ರ ಬರೆದಿದ್ದಾರೆ.
ಮೇಕೆದಾಟು ಕುಡಿಯುವ ನೀರಿನ ಯೋಜನೆಯಿಂದ ಎರಡು ರಾಜ್ಯಗಳಿಗೂ ಸಹಾಯವಾಗಲಿದೆ, ಸುಪ್ರೀಂ ಕೋರ್ಟ್ ಆದೇಶದನ್ವಯ ಯೋಜನೆ ಕೈಗೆತ್ತಿಕೊಳ್ಳಲಿದ್ದೇವೆ. ಸುಪ್ರೀಂ ಕೋರ್ಟ್ 400 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ ಅವಕಾಶ ನೀಡಿದ್ದು, 4.75 ಟಿಎಂಸಿ ನೀರು ಕುಡಿಯುವ ನೀರಿಗೆ ಅವಕಾಶ ನೀಡಿತ್ತು. ಈ ಯೋಜನೆಯಿಂದ ತಮಿಳುನಾಡಿನ ರೈತರಿಗೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ.
ಈ ಯೋಜನೆ ಸಂಬಂಧ ಈಗಾಗಲೇ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದೆ. ನಾವೂ ಕೂಡ ಯೋಜನೆಗೆ ಅನುಮತಿ ಕೋರಿ ಕೇಂದ್ರ ಸರ್ಕಾರದ ಮುಂದೆ ಮನವಿ ಸಲ್ಲಿಸಿದ್ದೇವೆ. ತಮಿಳು ನಾಡು ಕೂಡ ಕಾವೇರಿ ನೀರನ್ನ ಬಳಕೆ ಮಾಡಿಕೊಂಡು ಪವರ್ ಪ್ರಾಜೆಕ್ಟ್ ಆರಂಭಿಸಲು ನಿರ್ಧರಿಸಿದೆ. ಹೀಗಾಗಿ ಮೇಕೆದಾಟು ಯೋಜನೆಗೆ ಅಡ್ಡಿ ಪಡಿಸದಂತೆ ಎರಡೂ ರಾಜ್ಯದ ನಡುವೆ ಸಾಮರಸ್ಯ ಮುಂದುವರೆಸಲು ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಕಾವೇರಿಯ ಹೆಚ್ಚುವರಿ ನೀರನ್ನು ತಡೆದು ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳ ಜನರಿಗೆ ಕುಡಿಯುವ ನೀರು ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ, ಈ ಯೋಜನೆಗೆ ತಮಿಳುನಾಡು ಸರ್ಕಾರ ಅಡ್ಡಿ ಮಾಡುತ್ತಿದೆ. ಇದರಿಂದ ತಮಿಳುನಾಡಿನ ಕಾವೇರಿ ಜಲಾನಯನ ಪ್ರದೇಶಗಳಿಗೆ ಯಾವುದೇ ಹಾನಿಯಾಗುವುದಿಲ್ಲ. ಈ ಯೋಜನೆಗೆ ಸಹಕಾರ ನೀಡುವಂತೆ ಅವರು ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಮೇಕೆದಾಟು ಯೋಜನೆ ಸ್ಥಳ ಪರಿಶೀಲನೆಗಾಗಿ ಸಮಿತಿ ರಚಿಸಿ ದಕ್ಷಿಣ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ಕರ್ನಾಟಕ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್​ಜಿಟಿ) ಈ ದೂರನ್ನು ವಜಾಗೊಳಿಸಿ ಆದೇಶ ನೀಡಿತ್ತು. ತಮಿಳುನಾಡು ಸರ್ಕಾರ ಇದನ್ನು ವಿರೋಧಿಸಿದ ಸುಪ್ರೀಂ ಕೋರ್ಟ್​ಗೆ ಈಗಾಗಲೇ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಬಾಕಿಯಿದೆ.

ಪ್ರಮುಖ ಸುದ್ದಿ :-   ಪತಿ ಸಾವಿನ ಸುದ್ದಿ ತಿಳಿದ ನಂತರವೂ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪತ್ನಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement