ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಎರಡು ದಿನ ಮಳೆ

ಬೆಂಗಳೂರು: ಕರ್ನಾಟಕದಲ್ಲಿ ಮಳೆ ವಾರ ಕಾಲ ಬಿಡುವು ನೀಡಿದೆ. ಈಗ ಮತ್ತೆ ಮಳೆ ಆರಂಭವಾಗಿದ್ದು, ಮತ್ತೆರಡು ದಿನ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಲೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದಿನಿಂದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯ ಜೋರಾಗಲಿದೆ. ಕ . ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಜುಲೈ 5ರ ವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಲ್ಕೈದು ದಿನಗಳಿಂದ ಕಲ್ಯಾಣ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿತ್ತು. ಈ ಭಾಗದಲ್ಲಿ ಇಂದಿನಿಂದ ಮಳೆ ಕೊಂಚ ಕಡಿಮೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿಯೂ ಇನ್ನು ಮೂರು ದಿನ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಉತ್ತರ ಒಳನಾಡಿನಲ್ಲಿ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದೆ.
ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೂಡ ಈ ವಾರಾಂತ್ಯದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮಳೆ ಹೆಚ್ಚಾಗುತ್ತಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲೂ ನಾಳೆ ವರೆಗೆ ಮಳೆಯಾಗಲಿದೆ.

ಪ್ರಮುಖ ಸುದ್ದಿ :-   ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement