ಕರ್ನಾಟಕದಲ್ಲಿ ಸೋಮವಾರ ಮತ್ತೆ ಏರಿಕೆ ಕಂಡ ದೈನಂದಿನ ಕೊರೊನಾ ಸೋಂಕು

ಬೆಂಗಳೂರು:ಕರ್ನಾಟಕದಲ್ಲಿ ಸೋಮವಾರ 2,848 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 28,56,491ಕ್ಕೆ ಏರಿಕೆಯಾಗಿದೆ.ಭಾನುವಾರ 1546 ದೈನಂದಿನ ಪ್ರಕರಣ ದಾಖಲಾಗಿತ್ತು.
ಕಳೆದ 24 ಗಂಟೆಯಲ್ಲಿ ಸೋಂಕಿಗೆ 67 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,434ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.ಇದೇ ಸಮಯದಲ್ಲಿ 5,631 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 27,79,038ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 41,996 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಸೋಮವಾರ 520 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,16,181ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿಗೆ 7 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.94ಕ್ಕೆ ಬಂದಿದೆ.
05-07-2021 HMB Kannada

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

ನಿಮ್ಮ ಕಾಮೆಂಟ್ ಬರೆಯಿರಿ

advertisement