ಅನುದಾನಿತ ಶಾಲೆ, ಪದವಿ ಪೂರ್ವ ಕಾಲೇಜುಗಳಲ್ಲಿ ತೆರವಾದ ಹುದ್ದೆ ಭರ್ತಿಗೆ ಸರ್ಕಾರದಿಂದ ಆದೇಶ

ಬೆಂಗಳೂರು : ಅನುದಾನಿತ ಶಾಲೆ, ಪದವಿ ಪೂರ್ವ ಕಾಲೇಜುಗಳಲ್ಲಿ ತೆರವಾಗಿರುವ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಶ್ರೀನಿವಾಸ ಮೂರ್ತಿ ಆದೇಶ ಹೊರಡಿಸಿದ್ದಾರೆ. ದಿನಾಂಕ 31:12:2015 ರ ಪೂರ್ವದಲ್ಲಿ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ನಿವೃತ್ತಿ, ಮರಣ, ರಾಜೀನಾಮೆ ಹಾಗೂ ಇತ ಕಾರಣಗಳಿಂದ ಖಾಲಿ ಇವೆ.

ಈ ಹುದ್ದೆಗಳ ಪೈಕಿ ಸರ್ಕಾರದಿಂದ ಅನುಮೋದನೆಗೊಂಡು ನೇಮಕಾತಿ ಪ್ರಕ್ರಿಯೆ ಇಲಾಖೆ ಹಂತದಲ್ಲಿ ಬಾಕಿ ಇರುವ 257 ಭೋದಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ನೇಮಕಾತಿ ಆದೇಶವನ್ನು 2021-22ನೇ ಶೈಕ್ಷಣಿಕ ವರ್ಷ ಪ್ರಾರಂಭಗೊಂಡ ನಂತರ ನೀಡಲು ಸರ್ಕಾರದ ಸಹಮತಿ ನೀಡಲಾಗಿದೆ ಎಂದು ಆರ್ಥಿಕ ಇಲಾಖೆ ಅಭಿಪ್ರಾಯ ನೀಡಿದೆ, ಅದರಂತೆ ಮೇಲ್ಕಂಡ ಖಾಲಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಅನುಮೋದಿಸಿದೆ ಎಂದು ಆದೇಶ ಹೊರಡಿಸಿದ್ದಾರೆ .

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement