ಎಲ್ಗರ್ ಪರಿಷದ್​ ಪ್ರಕರಣ: ಹೋರಾಟಗಾರ ಫಾದರ್​ ಸ್ಟಾನ್​ ಸ್ವಾಮಿ ನಿಧನ

ಮುಂಬೈ: ಕಎಲ್ಗಾರ್ ಪರಿಷದ್ ಕಾರ್ಯಕ್ರಮ ಹಾಗೂ ನಂತರದ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿಗಳಲ್ಲೊಬ್ಬರಾದ ಫಾದರ್ ಸ್ಟ್ಯಾನ್ ಸ್ವಾಮಿ ಸೋಮವಾರ (ಜುಲೈ 5) ನಿಧನರಾಗಿದ್ದಾರೆ. ಬಾಂಬೆ ಹೈ ಕೋರ್ಟ್​ ಅವರ ಜಾಮೀನು ಅರ್ಜಿಯ ವಿಚಾರಣೆಗೆಂದು ಕೈಗೆತೆಗೆದುಕೊಂಡಾಗ ಅವರ ನಿಧನದ ಮಾಹಿತಿಯನ್ನು ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
84 ವರ್ಷದ ಸ್ಟಾನ್ ಸ್ವಾಮಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಭಾನುವಾರ ಅವರಿಗೆ ವೆಂಟಿಲೇಟರ್ ಅಳವಡಿಸಿ ಕೃತಕ ಉಸಿರಾಟ ಅಳವಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ 1:30ಕ್ಕೆ ಮೃತಪಟ್ಟಿದ್ದಾರೆ.
ಮೇ 28 ರಂದು ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಸ್ಟಾನ್ ಸ್ವಾಮಿ ಮುಂಬೈನ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕಳೆದ ವಾರ, ಸ್ಟಾನ್ ಸ್ವಾಮಿ ಹೈಕೋರ್ಟ್‌ನಲ್ಲಿ ಜಾಮೀನು ಕೋರಿ ಹೊಸ ಅರ್ಜಿಯನ್ನು ಸಲ್ಲಿಸಿದ್ದರು, ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯ (ಯುಎಪಿಎ) ಒಂದು ಸೆಕ್ಷನ್ ಅನ್ನು ಪ್ರಶ್ನಿಸಿದ್ದರು. ಎಲ್ಗಾರ್ ಪ್ರಕರಣದಲ್ಲಿ ಸ್ಟಾನ್ ಸ್ವಾಮಿ ಹಾಗೂ ಸಹ-ಆರೋಪಿಗಳನ್ನು ನವೀ ಮುಂಬಯಿಯ ತಲೋಜ ಜೈಲಿನಲ್ಲಿ ಇರಿಸಲಾಗಿತ್ತು. ಜೈಲಿನಲ್ಲಿ ಅಸಮರ್ಪಕ ಆರೋಗ್ಯ ಸೌಲಭ್ಯಗಳ ಬಗ್ಗೆ ಸ್ವಾಮಿ ದೂರು ನೀಡಿದ್ದರು.
ಎಲ್ಗಾರ್ ಪರಿಷದ್ ಕಾರ್ಯಕ್ರಮ ಹಾಗೂ ನಂತರದ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿಗಳಲ್ಲೊಬ್ಬರಾದ ಫಾದರ್ ಸ್ಟ್ಯಾನ್ ಸ್ವಾಮಿ ಆರೋಗ್ಯ ಸ್ಥಿತಿ ವಿಚಾರವಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ಮಾನವ ಹಕ್ಕು ಆಯೋಗ ನೋಟೀಸ್ ನೀಡಿತ್ತು. ಮಹಾರಾಷ್ಟ್ರದ ತಲೋಜಾ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಸ್ಟಾನ್ ಸ್ವಾಮಿ ಅವರನ್ನ ಅನಾರೋಗ್ಯದ ಕೆಲವಾರಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರ ಆರೋಗ್ಯದಲ್ಲಿ ಇನ್ನಷ್ಟು ವ್ಯತ್ಯಯವಾಗಿ ನಿನ್ನೆ ಭಾನುವಾರ ಸ್ವಾಮಿ ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿತ್ತು.
ನ್ಯಾಯಾಂಗ ಬಂಧನಕ್ಕೂ ಮುನ್ನ ಆರೋಗ್ಯವಾಗಿದ್ದ ಸ್ಟ್ಯಾನ್ ಸ್ವಾಮಿ ಅವರ ಸ್ಥಿತಿ ಈ ಮಟ್ಟಕ್ಕೆ ತಲುಪಿರುವ ವಿಚಾರವನ್ನು ಕೆಲ ಸಂಘಟನೆಗಳು ಬಾಂಬೆ ಹೈಕೋರ್ಟ್ ಹಾಗೂ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಗಮನಕ್ಕೆ ತಂದಿವೆ. ಮಾನವ ಹಕ್ಕು ಆಯೋಗ ಈ ಸಂಬಂಧ ಭಾನುವಾರ ಮಹಾರಾಷ್ಟ್ರ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿದ್ದು, ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿತ್ತು.
ಪ್ರಕರಣ ಏನು: ಭೀಮಾ ಕೋರೆಗಾಂವ್ ಗಲಭೆ ಪ್ರಕರಣ ಸಂಬಂಧ ಸಾಮಾಜಿಕ ಕಾರ್ಯಕರ್ತರಾದ ಗೌತಮ್ ನವಲಾಖ ಮತ್ತು ಸ್ಟಾನ್ ಸ್ವಾಮಿ ಸೇರಿದಂತೆ ಎಂಟು ಮಂದಿ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಸುಮಾರು 10 ಸಾವಿರ ಪುಟಗಳ ಆರೋಪಪಟ್ಟಿಯಲ್ಲಿ ಈ ಪ್ರಕರಣದ ಇತರ ಆರೋಪಿಗಳ ಜೊತೆ ಈ ಎಂಟು ಮಂದಿ ಶಾಮೀಲಾಗಿ ದೇಶವಿರೋಧಿ ಸಂಚು ರೂಪಿಸಿದ್ದರು ಎಂದು ಆರೋಪಿಸಿತ್ತು.

ಪ್ರಮುಖ ಸುದ್ದಿ :-   ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆಪ್ತ ಸಹಾಯಕನ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement