ಕೆಆರ್​ಎಸ್ ಡ್ಯಾಂ ಗೇಟಿಗೆ ಸುಮಲತಾರ ಮಲಗಿಸಬೇಕು :ಹೆಚ್​ಡಿಕೆ, ಮಹಿಳೆಯರ ಬಗ್ಗೆ ತುಚ್ಛ ಮಾತಿನಿಂದ ಅವರ ಮನಸ್ಥಿತಿ ಪ್ರದರ್ಶನ: ಸುಮಲತಾ ತಿರುಗೇಟು

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಮಧ್ಯೆ ಮತ್ತೆ ವಾಗ್ಯುದ್ಧ ನಡೆದಿದೆ. ಕೆಆರ್​ಎಸ್ ಡ್ಯಾಮ್ ಬಿರುಕು ಬಿಟ್ಟಿದೆ ಎಂದು ಧ್ವನಿ ಎತ್ತಿರುವ ಸಂಸದೆ ಸುಮಲತಾ ಅಂಬರೀಷ್ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಾಗದಾಳಿ ನಡೆಸಿದ್ದಾರೆ, ಇದಕ್ಕೆ ಸುಮಲತಾ ತಿರುಗೇಟು ನೀಡಿದ್ದಾರೆ.
. ಕೆಆರ್​ಎಸ್ ಡ್ಯಾಮ್ ಬಿರುಕು ಬಿಟ್ಟಿದೆ ಎಂದು ಹೇಳಿರುವ ಸುಮಲತಾ ಅವರನ್ನು ಅಣೆಕಟ್ಟೆ ಬಾಗಿಲಿಗೆ ಮಲಗಿಸಿಬಿಟ್ಟರೆ ಬಿಗಿಯಾಗಿ ಬಿಡುತ್ತದೆ ಎಂದು ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸುಮಲತಾ ಅಂಬರೀಶ್, ಒಬ್ಬ ಮಾಜಿ ಮುಖ್ಯಮಂತ್ರಿಯಾದವರು ಮಹಿಳೆಯರ ಬಗ್ಗೆ ಹೀಗೆ ತುಚ್ಛವಾಗಿ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ. ಕಳೆದ ಚುನಾವಣೆಯಲ್ಲಿ ಆದ ಅನುಭವದ ಪಾಠವನ್ನು ಅವರು ಇನ್ನೂ ಕಲಿತಿಲ್ಲ ಅವರ ಹೇಳಿಕೆಗಳು ಅವರ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ಅವರ  ವ್ಯಕ್ತಿತ್ವವನ್ನು ತೋರಿಸುತ್ತದೆ.  ಇಂತಹ ಹೇಳಿಕೆಗಳಿಗೆಲ್ಲ ನಾನು ಸೊಪ್ಪು ಹಾಕುವುದಿಲ್ಲ ಎಂದರು.
ಕುಮಾರಸ್ವಾಮಿ ಹೇಳಿಕೆ ಬಂದ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ ಬಂದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಕೆಆರ್‌ ಎಸ್‌ ಅಣೆಕಟ್ಟೆ ಸೋರಿಕೆ ವಿಚಾರದಲ್ಲಿ ನಾನು ಯಾರ ಮೇಲೆಯೂ ವೈಯಕ್ತಿವಾಗಿ ಆರೋಪ ಮಾಡಿಲ್ಲ. ಕೆಆರ್​ಎಸ್ ಸುತ್ತಮುತ್ತ ಅಕ್ರಮ ಗಣಿಗಾರಿಕೆಗಳು ನಡೆಯುತ್ತಿರುವುದನ್ನು ಅಲ್ಲಿನ ರೈತರೇ ನನ್ನ ಮುಂದೆ ಹೇಳಿದ್ದಾರೆ. ಈ ವಿಚಾರವನ್ನು ನಾನು ಸಂಸತ್ತಿಲ್ಲಿ ಪ್ರಸ್ತಾಪಿಸಿ ಧ್ವನಿ ಎತ್ತಿದ್ದೇನೆ. ಗಣಿಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರಿಗೆ ಖುದ್ದು ಅಕ್ರಮ ಗಣಿಗಾರಿಕೆಗಳನ್ನ ತೋರಿಸಿದ್ದೇನೆ.  ಎಲ್ಲ ಅಕ್ರಮ ಗಣಿಗಾರಿಕೆಗಳ ವಿರುದ್ಧ ಕ್ರಮ ಕೈಗೊಂಡರೆ ಸರ್ಕಾರಕ್ಕೆ ಸಾವಿರಾರು ಕೋಟಿ ಆದಾಯ ಸಿಗುತ್ತದೆ ಎಂದು ಸುಮಲತಾ ಹೇಳಿದ್ದಾರೆ.

ಪ್ರಮುಖ ಸುದ್ದಿ :-   'ಇದು ಸಾಮಾನ್ಯ ಚುನಾವಣೆಯಲ್ಲ' : ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೂ ಮುನ್ನ ಬಿಜೆಪಿ-ಎನ್‌ಡಿಎ ಅಭ್ಯರ್ಥಿಗಳಿಗೆ ಪತ್ರ ಬರೆದ ಪ್ರಧಾನಿ ಮೋದಿ

ಮಂಡ್ಯ ಜಿಲ್ಲೆಯಲ್ಲಿ ಏನೆಲ್ಲ ಹಗರಣಗಳು ನಡೆಯುತ್ತಿವೆ. ಯಾರೆಲ್ಲ ಶಾಮೀಲಾಗಿದ್ದಾರೆ ಎನ್ನುವುದು ಜಿಲ್ಲೆಯ ಜನತೆಗೆ ಗೊತ್ತಿದೆ. ಹಾಲು ಒಕ್ಕೂಟದ ಅವ್ಯವಹಾರವನ್ನು ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದ್ದು, ವರದಿ ಸಲ್ಲಿಸಿದ ನಂತರ ನಿಜಾಂಶ ಹೊರಬೀಳಲಿದೆ ಎಂದರು.
ಮೈ ಸುಗರ್ ಪುನರಾರಂಭವಾಗಲಿ : ಯಾವುದೇ ರೂಪದಲ್ಲಾದರೂ ಆಗಲಿ. ಸಕ್ಕರೆ ಕಾರ್ಖಾನೆ ಪುನರಾರಂಭವಾಗಬೇಕು ಎನ್ನುವುದು ನನ್ನ ಒತ್ತಾಯ. ಈ ವಿಷಯದಲ್ಲಿ ಹೀಗೆಯೇ ಮಾಡಿ ಎಂದು ನಾನು ಹೇಳುವುದಿಲ್ಲ ಎಂದರು.
ಇದಕ್ಕೂ ಮೊದಲ ಎಚ್‌.ಡಿ. ಕುಮಾರಸ್ವಾಮಿ ಅವರು ಕೃಷ್ಣರಾಜ ಸಾಗರ ಅಣೆಕಟ್ಟನ್ನು ಇವರೇ (ಸುಮಲತಾ ಅಂಬರೀಶ್) ರಕ್ಷಣೆ ಮಾಡುತ್ತಾರಂತಲ್ಲ. ಬಹುಶಃ ಅವರನ್ನೇ ಕೆಆರ್​ಎಸ್ ಡ್ಯಾಮ್ ಗೇಟ್​ಗೆ ಮಲಗಿಸಿಬಿಟ್ಟರೆ ಬಿಗಿಯಾಗಿಬಿಡುತ್ತದೆ ಎಂದು ಕಾಣುತ್ತದೆ. ಯಾರದ್ದೋ ವೈಯಕ್ತಿಕ ದ್ವೇಷಕ್ಕೆ ಹೇಳಿಕೆ ಕೊಡುವುದು ಬಹಳ ದಿನ ನಡೆಯುವುದಿಲ್ಲ ಎಂದು ಟೀಕಿಸಿದ್ದಾರೆ.

ಮಂಡ್ಯ ಜಿಲ್ಲೆಗೆ ಇವರಂತಹ ಸಂಸದರು ಹಿಂದೆಯೂ ಬಂದಿಲ್ಲ, ಮುಂದೆಯೂ ಬರುವುದಿಲ್ಲ. ಅನುಕಂಪದ ಮೇಲೆ ಇವರು ಸಂಸದೆಯಾಗಿ ಬಂದಿದ್ದಾರೆ. ಜನರ ಋಣ ತೀರಿಸುವ ಕೆಲಸ ಮಾಡಬೇಕು. ಪದೇ ಪದೇ ಇಂತಹ ಅವಕಾಶಗಳು ಸಿಗುವುದಿಲ್ಲ.ಸಿಕ್ಕ ಅವಕಾಶವನ್ನು ಸರಿಯಾಗಿ ಸದ್ಬಳಕೆ ಮಾಡಿಕೊಂಡು ಜನರಿಗೆ ಉಪಯೋಗವಾಗುವ ಕೆಲಸ ಮಾಡಲಿ. ಇಲ್ಲವಾದಲ್ಲಿ ಮುಂದೆ ಜನರು ಅವರಿಗೆ ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ರಾಜ್‌ ಕುಂದ್ರಾಗೆ ಸೇರಿದ ₹97 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.

ಅಕ್ರಮ ಗಣಿಗಾರಿಕೆಯಿಂದ ಕೆಆರ್​ಎಸ್ ಡ್ಯಾಂಗೆ ಹಾನಿ
ಶ್ರೀರಂಗಪಟ್ಟಣ-ಪಾಂಡವಪುರ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಕೆಆರ್​ಎಸ್ ಡ್ಯಾಂ ಅಸ್ತಿತ್ವಕ್ಕೆ ಅಡ್ಡಿಯಾಗಿದೆ ಎಂದು ಮಂಡ್ಯದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯೊಂದರಲ್ಲಿ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದರು. ಶ್ರೀರಂಗಪಟ್ಟಣ-ಪಾಂಡವಪುರ ಬಳಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಈ ಕುರಿತು ಸಂಸತ್​ನಲ್ಲಿ ಹಲವು ಬಾರಿ ಚರ್ಚಿಸಿದ್ದೇನೆ. ಈ ವಿಷಯವನ್ನು ಸಚಿವರ ಗಮನಕ್ಕೂ ತಂದಿದ್ದೇನೆ. ಅಕ್ರಮ ಚಟುವಟಿಕೆ ನಿಲ್ಲಿಸಿ ಡ್ಯಾಂ ರಕ್ಷಿಸಬೇಕು. ಅಕ್ರಮ ಚಟುವಟಿಕೆ ನಿಲ್ಲಿಸುವುದು ಜಿಲ್ಲಾಡಳಿತದ ಹೊಣೆಯಾಗಿದ್ದು, ನಾನೂ ಸಹ ಕೈಜೋಡಿಸುತ್ತೇನೆ. ಅಕ್ರಮ ಗಣಿಗಾರಿಕೆಯ ಹಿಂದೆ ಯಾರೇ ಪ್ರಭಾವಿ ಇದ್ದರೂ ತಡೆಗಟ್ಟಲು ನಾನು ಸಿದ್ಧ ಎಂದು ಅವರು ಹೇಳಿದ್ದರು.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement