ಕರ್ನಾಟಕದಲ್ಲಿ ಮಂಗಳವಾರ ದೈನಂದಿನ ಪ್ರಕರಣ ಮತ್ತೆ ಏರಿಕೆ..!

posted in: ರಾಜ್ಯ | 0

ಬೆಂಗಳೂರು:ಕರ್ನಾಟಕದಲ್ಲಿ ಮಂಗಳವಾರ ಕಳೆದ 24 ಗಂಟೆಗಳಲ್ಲಿ 3104 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 28,59,595ಕ್ಕೆ ಏರಿಕೆಯಾಗಿದೆ. 4992 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಗುಣಮುಖರಾದವರ ಒಟ್ಟು ಸಂಖ್ಯೆ 2784030ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಮಂಗಳವಾರ 92 ಮಂದಿ ಮೃತಪಟ್ಟಿದ್ದು, ಈವರೆಗಿನ ಒಟ್ಟಾರೆ ಮೃತರ ಸಂಖ್ಯೆ 35526ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 40016 ಸಕ್ರಿಯ ಪ್ರಕರಣಗಳಿವೆ. .ಪಾಸಿಟಿವಿಟಿ ದರ ಶೇ.2.65 ರಷ್ಟಿದ್ದರೆ, ಮರಣ ಪ್ರಮಾಣ ಶೇ.2.96 ರಷ್ಟಿದೆ.
ಬೆಂಗಳೂರಿನಲ್ಲಿ 715 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 1863 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 15 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಜಿಲ್ಲಾವಾರು ಸಂಪೂರ್ಣ ವಿವರಗಳನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

06-07-2021 HMB Kannada

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ