ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಕೊರೋನಾ ಲಸಿಕೆ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಮಾತಿನ ಚಕಮಕಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಜಟಾಪಟಿಗೂ ಕಾರಣವಾಗಿದೆ ಎಂದು ವರದಿಯಾಗಿದೆ.
ತೀರ್ಥಹಳ್ಳಿಯ ಸೀಬಿನಗೆರೆ ಶಾಲೆಯಲ್ಲಿ ಬಿಜೆಪಿಯವರು ಸೂಚಿಸಿದವರಿಗೆ ಮಾತ್ರವೇ ಲಸಿಕೆ ನೀಡಲಾಗುತ್ತಿದೆ ಎಂಬ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದು ಈ ಘಟನೆಗೆ ಕಾರಣವಾಗಿದೆ. ಇದು ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಕಾರಣವಾಗಿ ನಂತರ ಪರಿಸ್ಥಿತಿ ವಿಕೋಪಕ್ಕೆ ಗಲಾಟೆ ನಡೆದಿದೆ. ಕಾಂಗ್ರೆಸ್ಸಿನ ನಮ್ರತ್ ಹಾಗೂ ಬಿಜೆಪಿಯ ನಾಗರಾಜ್, ವಿಶ್ವನಾಥ ಗಾಣಿಗ, ದಯಾನಂದ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದೇ ಕಾರಣದಿಂದಾಗಿ ಹೋಟೆಲ್ ನಲ್ಲಿ ಉಪಹಾರ ಸೇವಿಸುತ್ತಿದ್ದಂತ ಕಾಂಗ್ರೆಸ್ ಯುವ ಮುಖಂಡ ಸುಭಾಷ್ ಕುಲಾಲ್ ಮೇಲೆ ಕೆಲ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ನಂತರ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಕಿಮ್ಮನೆ ರತ್ನಾಕರ್ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತರ ಬಂಧಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ಹಲ್ಲೆಗೊಳಗಾಗಿ ದಾಖಲಾದ ಆಸ್ಪತ್ರೆಗೆ ಶಾಸಕ ಅರಗ ಜ್ಞಾನೇಂದ್ರ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ