ಮಹತ್ವದ ಸುದ್ದಿ.. ಜೆಇಇ ಮೇನ್‌ -2021 ಪರೀಕ್ಷೆ ವೇಳಾಪಟ್ಟಿ ಪ್ರಕಟ

ನವದೆಹಲಿ: ಜೆಇಇ ಮುಖ್ಯ ಪರೀಕ್ಷೆ-2021 ದಿನಾಂಕ ಪ್ರಕಟವಾಗಿದ್ದು, ಜುಲೈ 20ರಿಂದ ಜುಲೈ 25ರ ವರೆಗೆ ಹಾಗೂ ಜುಲೈ 27ರಿಂದ ಆಗಸ್ಟ್​​ 2ರ ವರೆಗೆ ಜೆಇಇ ಮುಖ್ಯ ಪರೀಕ್ಷೆ ನಡೆಯಲಿದೆ.
ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಡಾ.ರಮೇಶ್ ಪೋಖ್ರಿಯಾಲ್ ನಿಶಾಂಕ್ ಅಧಿಕೃತ ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ. ಪರೀಕ್ಷೆಗಳಿಗೆ ಹಾಜರಾಗಲು ಅರ್ಜಿ ನಮೂನೆಗಳು ಮಂಗಳವಾರದಿಂದಲೇ (ಜುಲೈ 6) ದೊರೆಯಲಿವೆ ಎಂದು ಅವರು ವಿದ್ಯಾರ್ಥಿಗಳ ಜತೆಗೆ ನಡೆಸಿದ ನೇರ ಸಂವಾದದ ಸಮಯದಲ್ಲಿ ಮಾಹಿತಿ ನೀಡಿದರು.
ಕೊವಿಡ್ ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಕೊವಿಡ್ ತಡೆ ಮತ್ತು ಅಗತ್ಯ ಕಟ್ಟುನಿಟ್ಟಿನ ಕ್ರಮಗಳ ಜತೆಗೆ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಸಹ ಕೇಂದ್ರ ಶಿಕ್ಷಣ ಸಚಿವ ಡಾ.ರಮೇಶ್ ಪೋಖ್ರಿಯಾಲ್ ನಿಶಾಂಕ್ ತಿಳಿಸಿದರು.
20 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಜೆಇಇ -2021ರ ಮುಖ್ಯಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಈವರೆಗೆ 12 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆದಿದ್ದಾರೆ. ಇನ್ನೂ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಕಾಯುತ್ತಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ