ಕೆಆರ್.ಎಸ್. ಸುತ್ತಮುತ್ತ ಗಣಿಗಾರಿಕೆ ಸ್ಥಗಿತ ಕೆಆರ್ ಎಸ್‌ ಡ್ಯಾಂನಲ್ಲಿ ಯಾವುದೇ ಸೋರಿಕೆ ಇಲ್ಲ: ಆತಂಕ ಬೇಡ

posted in: ರಾಜ್ಯ | 0

ತುಮಕೂರು: ಕೆ.ಆರ್.ಎಸ್. ಡ್ಯಾಂ ಸುತ್ತಮುತ್ತಲಿನ ೧೦ ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಮೈನಿಂಗ್ ಚಟುವಟಿಕೆಗಳನ್ನು ಸ್ಥಗಿತ ಮಾಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮದವರೊಮದಿಗೆ ಮಾತನಾಡಿದ ಸಚಿವರು, ಪಾಂಡವಪುರ ಪಕ್ಕದ ಬೇಬಿ ಬೆಟ್ಟದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಯಾವುದೇ ಗಣಿಗಾರಿಕೆ ನಡೆದಿಲ್ಲ. ಈ ಸಂಬಂಧಹೆಚ್ಚಿನ ತನಿಖೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನಿನ್ನೆ ಸಂಸದೆ ಸುಮಲತಾ ಅವರು ಕೆಆರ್.ಎಸ್. ಸುತ್ತಮುತ್ತಲಿನ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆದಿದೆ. ಇದನ್ನು ನಿಲ್ಲಿಸಬೇಕು. ಇದರಿಂದಾಗಿ ಕೆ.ಆರ್.ಎಸ್.ನಲ್ಲಿ ನೀರು ಸೋರಿಕೆಯಾಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಅವರಿಗೆ ತಿಳಿಸಿದ್ದರು.

ಈ ಕುರಿತು ಸ್ಪಷ್ಟಣೆ ನೀಡಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ  ಅವರು ಗಣಿಗಾರಿಕೆಯಂತೂ ಕೆಆರ್.ಎಸ್. ಸುತ್ತಲಿನ ಹತ್ತು ಕಿಮೀ ವ್ಯಾಪ್ತಿಯಲ್ಲಿ ನಡೆದಿಲ್ಲ ಹಾಗೂ ಕೆ.ಆರ್.ಎಸ್. ಡ್ಯಾಂನಲ್ಲಿ ಯಾವುದೇ ಸೋರಿಕೆ ಇಲ್ಲ, ಆತಂಕ ಬೇಡ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement