ನಾನು ಕೇಂದ್ರ ಸಚಿವನಾಗಿದ್ದಾಗ ಯಡಿಯೂರಪ್ಪ ಮಂತ್ರಿಯೂ ಆಗಿರಲಿಲ್ಲ: ಯತ್ನಾಳ ಗುಡುಗು

posted in: ರಾಜ್ಯ | 0

ಮೈಸೂರು: ‌ಬಿಜೆಪಿಯಲ್ಲಿ ಬಿ.ಎಸ್‌.ಯಡಿಯೂರಪ್ಪ ಮಂತ್ರಿನೂ ಆಗಿರಲಿಲ್ಲ, ನಾನಾಗಲೇ ಕೇಂದ್ರ ಸಚಿವನಾಗಿದ್ದೆ ಎಂದು ಬಿಎಸ್‌ವೈ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಮತ್ತೆ ಗುಡುಗಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಿಂದೆಯೇ ಮುಖ್ಯಮಂತ್ರಿ ಆಗಬೇಕಿತ್ತು. ನಾನೇ ಕೆಲವು ಅವಕಾಶಗಳನ್ನು ಮಿಸ್ ಮಾಡಿಕೊಂಡಿದ್ದೇನೆ. ಸದಾನಂದಗೌಡ, ಜಗದೀಶ್ ಶೆಟ್ಟರ್‌ಗಿಂತ ನಾನು ಹಿರಿಯ. ಯಡಿಯೂರಪ್ಪ ಮಂತ್ರಿನೂ ಆಗಿರಲಿಲ್ಲ, ಆಗಲೇ ಕೇಂದ್ರ ಸಚಿವನಾಗಿದ್ದೆ. ನನ್ನ ರಾಜಕೀಯ ಜೀವನ ಅಂತ್ಯವಾದರೂ ಪರವಾಗಿಲ್ಲ. ಭ್ರಷ್ಟಾಚಾರ, ಕುಟುಂಬಶಾಹಿ ವಿರುದ್ಧ ನನ್ನ ಹೋರಾಟ ನಿಲ್ಲಿಸುವುದಿಲ್ಲ ಎಂದು ಹೇಳಿದರು.

ಯಡಿಯೂರಪ್ಪನವರೇ ಸಾಕು ಗೌರವಯುತವಾಗಿ ನಿವೃತ್ತಿಯಾಗಿ. ನಿಮ್ಮ ಭ್ರಷ್ಟಾಚಾರದ ಕರ್ಮಕಾಂಡವೇ ನಮ್ಮ ಬಳಿ ಇದೆ. ಯಡಿಯೂರಪ್ಪನವರ ಭ್ರಷ್ಟಾಚಾರದ ದಾಖಲೆಗಳನ್ನು ಬಿಡುಗಡೆ ಮಾಡಿದರೆ, ಮಠಾಧೀಶರು ಮಠ ಬಿಟ್ಟು ಹೋಗಬೇಕಾಗುತ್ತದೆ. ನಮ್ಮ ರಾಜ್ಯದ ಹಿತದೃಷ್ಟಿಯಿಂದ, ಪಕ್ಷದ ಹಿತದೃಷ್ಟಿಯಿಂದ ಹಾಗೂ ನಿಮ್ಮ ಕುಟುಂಬದ ಹಿತದೃಷ್ಟಿಯಿಂದಲೂ ನಿವೃತ್ತಿ ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.

ನಾನು ಏಕಾಂಗಿಯಲ್ಲ, ಸಾಕಷ್ಟು ಸಚಿವರು ಸಂಪರ್ಕದಲ್ಲಿದ್ದಾರೆ. ನೀವು ಮಾಡುತ್ತಿರುವುದು ನ್ಯಾಯಯುತ ಹೋರಾಟ. ಹೋರಾಟವನ್ನು ಮುಂದುವರಿಸಿ ಎಂದು ಅವರು ನನಗೆ ಹೇಳಿದ್ದಾರೆ. ಕೆಲವು  ದಿನಗಳಲ್ಲಿ ನನ್ನ ಹೋರಾಟದ ಫಲ ಸಿಗುತ್ತದೆ ಎಂಬ ವಿಶ್ವಾಸವಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement