ಈಶಾನ್ಯ ಸಾರಿಗೆ ನಿಗಮಕ್ಕೆ ‘ಕಲ್ಯಾಣ ಕರ್ನಾಟಕ ಸಾರಿಗೆ ನಿಗಮʼ ಎಂದು ಮರುನಾಮಕರಣ

ಬೆಂಗಳೂರು: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಹೆಸರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ
ಸಾರಿಗೆ ನಿಗಮಗಳ ಅಧಿನಿಯಮ 1950 ರ ( ಕೇಂದ್ರ ಅಧಿನಿಯಮ 64) ಕಲಮ್ ಮೂರರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಆದೇಶ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇನ್ಮುಂದೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಕರೆಯುವುದಾಗಿ ಮಾಹಿತಿ ನೀಡಿದ್ದಾರೆ.

ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣವಾದ ನಂತರ ಈಶಾನ್ಯ ಸಾರಿಗೆಗೂ ಈ ರೀತಿ ಮರು ನಾಮಕರಣ ಮಾಡಬೇಕೆಂದು ಬಹುದಿನಗಳ ಬೇಡಿಕೆ ಸ್ಥಳೀಯರಿಂದ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಈಗ ಕ್ರಮ ಕೈಗೊಳ್ಳಲಾಗುತ್ತಿದೆ. ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಎಂದು ಈಶಾನ್ಯ ಸಾರಿಗೆ ನಿಗಮಕ್ಕೆ ಮರುನಾಮಕರಣ ಮಾಡಲಾಗುತ್ತಿದೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement