ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಸೈಕಲ್ ಜಾಥಾ

posted in: ರಾಜ್ಯ | 0

ಗದಗ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ದರ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಮುಖಂಡರು, ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಕಾರ್ಯಕರ್ತರು ನಗರದಲ್ಲಿ ಸೈಕಲ್ ಜಾಥಾ ನಡೆಸಿದರು.

ಬೆಲೆ ಏರಿಕೆ ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಗದಗ ಜಿಲ್ಲಾ ಕಾಂಗ್ರೆಸ್, ಯುವ ಕಾಂಗ್ರೆಸ್ ಸಮಿತಿ ಹಾಗೂ ಮುಂಚೂಣಿ ಘಟಕಗಳಿಂದ ಸೈಕಲ್ ಜಾಥಾ ಬುಧವಾರ ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಭೂಮರಡ್ಡಿ ಸರ್ಕಲ್, ಕೆ.ಎಚ್. ಪಾಟೀಲ ಸರ್ಕಲ್, ಜನತಾ ಬಜಾರ, ಹುಯಿಗೋಳ ನಾರಾಯಣರಾವ ವೃತ್ತ, ಮಹೇಂದ್ರಕರ ಸರ್ಕಲ್, ಗಾಂಧಿ ಸರ್ಕಲ್, ಜರ್ಮನ್ ಆಸ್ಪತ್ರೆ ಮೂಲಕ ಬೆಟಗೇರಿಯ ಟೆಂಗಿನಕಾಯಿ ಬಜಾರವರೆಗೆ ಅಂದಾಜು ೫ ಕಿ.ಮೀ. ಜಾಥಾ ನಡೆಯಿತು.

ಜಾಥಾಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಎಸ್.ಆರ್. ಪಾಟೀಲ, ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಶಾಸಕರಾದ ಎಚ್.ಕೆ.ಪಾಟೀಲ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಜಿ.ಎಸ್. ಪಾಟೀಲರು ಚಾಲನೆ ನೀಡಿ ಮಾತನಾಡಿ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ದರ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಎಸ್.ಆರ್. ಪಾಟೀಲ, ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಶಾಸಕರಾದ ಎಚ್.ಕೆ.ಪಾಟೀಲ, ಐ.ಎಸ್. ಪಾಟೀಲ ಮುಂತಾದವರು ಸ್ವತಃ ಸೈಕಲ್ ತುಳಿದು ಸರಕಾರದ ಬೆಲೆಏರಿಕೆ ನೀತಿಯನ್ನು ಖಂಡಿಸಿದರು.

ಕಾಂಗ್ರೆಸ್ ಜಿಲ್ಲಾ ಉಸ್ತುವಾರಿಯಾಗಿರುವ ಮಾಜಿ ಸಚಿವರಾದ ಆಲ್ಕೋಡ ಹನಮಂತಪ್ಪ, ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ಜೆ.ಎಸ್. ಆಂಜನೇಯಲು, ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ ಮಂದಾಲಿ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಫಾರೂಖ ಹುಬ್ಬಳ್ಳಿ ಮುಖಂಡರಾದ ವಿ.ಬಿ. ಸೋಮನಕಟ್ಟಿ ಜಿಪಂ ಮಾಜಿ ಅಧ್ಯಕ್ಷರಾದ ವಾಸಣ್ಣ ಕುರಡಗಿ ಸೇರಿ ಜಿಲ್ಲೆಯ ಪಕ್ಷದ ಮಾಜಿ ಸಚಿವರು, ಮಾಜಿ ಶಾಸಕರು, ಜನಪ್ರತಿನಿಧಿಗಳು ಸೈಕಲ್ ಜಾಥದಲ್ಲಿ ಪಾಲ್ಗೊಂಡಿದ್ದರು.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement