ಸಿಡಿ ಪ್ರಕರಣ: ತನಿಖೆ ಮುಕ್ತಾಯ,ಅಂತಿಮ ತನಿಖಾ ವರದಿ ಸಿದ್ಧ ಎಂದ ಎಸ್‌ಐಟಿ

ಬೆಂಗಳೂರು: ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ಅಂತಿಮ ತನಿಖಾ ವರದಿ ಸಿದ್ಧವಿದೆ ಎಂದು ಹೈಕೋರ್ಟ್​ಗೆ ಎಸ್‌ಐಟಿ ಮಂಗಳವಾರ ಮಾಹಿತಿ ನೀಡಿದೆ.
ಯುವತಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್, ದಾಖಲೆಗಳ ಇಂಗ್ಲಿಷ್ ಅನುವಾದ ಸಲ್ಲಿಸದ ಹಿನ್ನೆಲೆಯಲ್ಲಿ ಇಂಗ್ಲಿಷ್ ಅನುವಾದ ಸಲ್ಲಿಸಲು ಯುವತಿ ಪರ ವಕೀಲರಿಗೆ ಸೂಚನೆ ನೀಡಿದ್ದು, ಜುಲೈ 14ಕ್ಕೆ ವಿಚಾರಣೆ ಮುಂದೂಡಿದೆ.
ಬಿ-ರಿಪೋರ್ಟ್ ಸಲ್ಲಿಕೆಯಾದ ಬಳಿಕವೇ ಸಿಡಿ ಪ್ರಕರಣ ಅಂತ್ಯಗೊಳ್ಳಲಿದ್ದು, ಇದಾದ ಬಳಿಕ ಜಾರಕಿಹೊಳಿ ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳುವ ಸಾಧ್ಯತೆ ಹೆಚ್ಚಾಗಲಿದೆ.
ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೆಹಲಿಯಲ್ಲಿ ಸ್ವಪಕ್ಷೀಯರ ವಿರುದ್ಧವೇ ತಿರುಗಿಬಿದ್ದಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಬೆರಿಕೆ ಹಾಕಿದ್ದರು. ನಂತರ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್​ ಭೇಟಿ ನಂತರ ನಿರ್ಧಾರ ಬದಲಿಸಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement