ಕರ್ನಾಟಕದಲ್ಲಿ ಕೋವಿಡ್‌ ಸಕಾರಾತ್ಮಕ ದರ ಇಳಿಮುಖ

posted in: ರಾಜ್ಯ | 0

ಬೆಂಗಳೂರು: ಕೊರೊನಾ ಸೋಂಕು ಸಾವಿನ ಸಂಖ್ಯೆ ರಾಜ್ಯದಲ್ಲಿ ಗುರುವಾರ ನಿನ್ನೆಗಿಂತ ಕಡಿಮೆಯಾಗಿದೆ.
ರಾಜ್ಯದಲ್ಲಿ ಗುರುವಾರ ಹೊಸದಾಗಿ 2,530 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 62 ಮಂದಿ ಮೃತಪಟ್ಟಿದ್ದಾರೆ. ಇದೇವೇಳೆ 3,344 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಇದುವರೆಗೆ ಒಟ್ಟಾರೆ ಸೋಂಕಿನ ಸಂಖ್ಯೆ 28,64,868 ಮಂದಿಗೆ ಏರಿಕೆಯಾಗಿದೆ.ಇ ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 27,90453 ಕ್ಕೆ ಹೆಚ್ಚಳವಾಗಿದೆ .ಒಟ್ಟು 35,663 ಮಂದಿಮೃತಪಟ್ಟಿದ್ದಾರೆ. ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಕೊರೊನಾ ಸೋಂಕಿನ ಪಾಸಿಟಿವಿ ಪ್ರಮಾಣ ಶೇ.1.60 ಕ್ಕೆ ಕುಸಿದಿದ್ದು ರಾಜ್ಯದಲ್ಲಿ ಸೋಂಕಿನ ಮರಣ ಪ್ರಮಾಣ ಶೇ.2.45ಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ 38,729ಕ್ಕೆ ಸಕ್ರಿಯ ಪ್ರಕರಣಗಳು ಕುಸಿದಿವೆ.ರಾಜ್ಯದ 21 ಜಿಲ್ಲೆಯಲ್ಲಿ 100 ಕ್ಕಿಂತ ಕಡಿಮೆ ಸೋಂಕು ದೃಢಪಟ್ಟಿದೆ.
ಬೆಂಗಳೂರಿನಲ್ಲಿ ಗುರುವಾರ 514 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 9 ಮಂದಿ ಮೃತಪಟ್ಟಿದ್ದಾರೆ, 753 ಜನರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

08-07-2021 HMB Kannada

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ