ಮಹತ್ವದ ಬೆಳವಣಿಗೆಯಲ್ಲಿ ಧಾರವಾಡ ಜಿಪಂ ಸದಸ್ಯ ಯೋಗೇಶ್ ಹತ್ಯೆ ಪ್ರಕರಣದಲ್ಲಿ ಗದಗ ಎಪಿಎಂಸಿ ಕಾರ್ಯದರ್ಶಿ ಬಂಧನ..!

posted in: ರಾಜ್ಯ | 0

ಗದಗ: ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಜೈಲಿನಲ್ಲಿದ್ದು, ಹಿಂದೆ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಆಪ್ತ ಕಾರ್ಯದರ್ಶಿಯಾಗಿದ್ದ   ಸದ್ಯ ಗದಗ ಎಪಿಎಂಸಿ ಕಾರ್ಯದರ್ಶಿ  ಸೋಮು ನ್ಯಾಮಗೌಡ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಪ್ರಸ್ತುತ ಗದಗ ಎಪಿಎಂಸಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅವರು ವಿನಯ ಕುಲಕರ್ಣಿ ಅವರು ಸಚಿವರಾಗಿದ್ದ ವೇಳೆ ಅವರ ಆಪ್ತ ಕಾರ್ಯದರ್ಶಿಯಾಗಿದ್ದರು. ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಜೈಲು ಸೇರಿದ್ದಾರೆ. ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಸೋಮು ನ್ಯಾಮಗೌಡ ಅವರಿಗೆ ಹತ್ಯೆಯ ಬಗ್ಗೆ  ಮಾಹಿತಿ ಇತ್ತು ಎಂದು  ಸೂಕ್ತ ಸಾಕ್ಷ್ಯಾಧಾರ ಸಂಗ್ರಹಿಸಿದ ನಂತರ ಸಿಬಿಐ ಅಧಿಕಾರಿಗಳು ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅವರನ್ನು ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.

ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆಗೂ ಮೊದಲು ವಿನಯ್ ಕುಲಕರ್ಣಿ ದೆಹಲಿ ಪ್ರವಾಸಕ್ಕೆ ಹೋಗಿರುವಂತೆ ನಕಲಿ ಪ್ರವಾಸದ ವೇಳಾಪಟ್ಟಿಯನ್ನು ತಯಾರಿಸಲಾಗಿತ್ತು. ದೆಹಲಿಗೆ ವಿಮಾನದ ಟಿಕೆಟ್ ಬುಕ್ ಮಾಡಿ ಹತ್ಯೆ ಪ್ರಕರಣದ ಬಗ್ಗೆ ಸಂಶಯ ಬರದಂತೆ ಪ್ಲಾನ್ ಮಾಡಿಕೊಂಡಿದ್ದರು. ವಿನಯ ಕುಲಕರ್ಣಿ ದೆಹಲಿ ಪ್ರವಾಸಕ್ಕೆ ತೆರಳಿರುವಂತೆ ನಾಟಕವಾಡಿಸಿದ್ದರು. ದೆಹಲಿಯ ಬದಲು ವಿನಯ ಕುಲಕರ್ಣಿ ಬೆಂಗಳೂರಿಗೆ ತೆರಳಿ ಬೆಂಗಳೂರಿನ ಮೌರ್ಯ ಹೋಟೆಲ್ ನಲ್ಲಿ ತಂಗಿದ್ದರು. ಯೋಗೀಶ್ ಗೌಡ ಹತ್ಯೆ ನಡೆದ ನಂತರ ಆರೋಪಿಗಳನ್ನು ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಮತ್ತು ವಿನಯ ಕುಲಕರ್ಣಿ ಭೇಟಿಯಾಗಿದ್ದರು. ಈ ಬಗ್ಗೆ ಸೂಕ್ತ ಸಾಕ್ಷ್ಯಾಧಾರ ಸಂಗ್ರಹಿಸಿದ ನಂತರವೇ ಗದಗ ಎಪಿಎಂಸಿ ಕಾರ್ಯದರ್ಶಿಯಾಗಿ ಕತ್ಯವ್ಯ ನಿರ್ವಹಿಸುತ್ತಿರುವ ಸೋಮು ನ್ಯಾಮಗೌಡ ಅವರನ್ನು ಇದೇ   ಆರೋಪದ ಮೇಲೆ ಸಿಬಿಐ ಬಂಧಿಸಿದೆ ಎಂದು ಹೇಳಲಾಗಿದೆ.

ಬಂಧಿತ ಗದಗ ಎಪಿಎಂಸಿ ಕಾರ್ಯದರ್ಶಿ ಸೋಮು ನ್ಯಾಮಗೌಡ ಅವರು ಗದಗ, ಬ್ಯಾಡಗಿ ಸೇರಿದಂತೆ ಮೂರು ಎಪಿಎಂಸಿಗಳಿಗೂ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು  ಎನ್ನಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ