ಮಹಿಳಾ ಸಬಲೀಕರಣ, ಸಮಗ್ರ ಭಾರತದ ಅಭಿವೃದ್ಧಿ ನನ್ನ ಗುರಿ

posted in: ರಾಜ್ಯ | 0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನಗಳನ್ನು ಕಾಯ್ದಿರಿಸುವ ಮೂಲಕ ರಾಜಕೀಯದಲ್ಲಿನ ಲಿಂಗ ಅಸಮಾನತೆಯನ್ನು ಹೋಗಲಾಡಿಸಲು ಶ್ರಮಿಸುತ್ತಿದ್ದಾರೆ. ರಾಜಕೀಯದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚುತ್ತಿದೆ. ಇದು ಮಹಿಳೆಯರ ಸಮಸ್ಯೆಗಳನ್ನು ಸಮರ್ಥವಾಗಿ ಪರಿಹರಿಸಲು ಸರ್ಕಾರಕ್ಕೆ ಸಹಾಯ ಮಾಡುತ್ತದೆ ಎಂದು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಮಹಿಳಾ ಸಬಲೀಕರಣದತ್ತ ಗಮನಹರಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಬಿಜೆಪಿ ಸರ್ಕಾರದಲ್ಲಿ ಮಾತ್ರ ಮಹಿಳೆಯರು ಹಣಕಾಸು ಮತ್ತು ಬಾಹ್ಯ ವ್ಯವಹಾರಗಳಂತಹ ಪ್ರಮುಖ ಸಚಿವ ಸ್ಥಾನಗಳನ್ನು ಪಡೆಯಲು ಸಾಧ್ಯ. ಮಹಿಳೆಯರ ಸುಧಾರಣೆಗಾಗಿ ಅನೇಕ ಕಾನೂನುಗಳನ್ನು ಸಹ ತರಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಸಂಪುಟಕ್ಕೆ ಮೀನಾಕ್ಷಿ ಲೇಖಿ ಮತ್ತು ಅನುಪ್ರಿಯಾ ಸಿಂಗ್ ಪಟೇಲ್ ಸೇರಿದಂತೆ ೧೧ ಮಹಿಳೆಯರು ಸೇರಿದ್ದಾರೆ. ಅವರಲ್ಲಿ ಕರ್ನಾಟಕದಿಂದ ಚಿಕ್ಕಮಗಳೂರು-ಉಡುಪಿ ಸಂಸದೆಯಾಗಿರುವ ತಾಉ ನಾರಿಶಕ್ತಿ ಸೇರಿದ್ದಾಗಿ ಅವರು ಹೇಳಿದ್ದಾರೆ.

ತಾವು ದಕ್ಷಿಣ ರಾಜ್ಯದಿಂದ ಬಂದವಳಾಗಿದ್ದರೂ, ಸಮಗ್ರ ಭಾರತದ ಅಭಿವೃದ್ಧಿಯತ್ತ ಗಮನ ಹರಿಸುವೆ. ದಕ್ಷಿಣದಲ್ಲಿ ಭಾರತೀಯ ಜನತಾ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಸಚಿವೆ ಶೋಭಾ ಕರಂದ್ಲಾಜೆ ಭರವಸೆ ನೀಡಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ