ಕರ್ನಾಟಕ: ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.1ರಷ್ಟು ಮೀಸಲಾತಿ

posted in: ರಾಜ್ಯ | 0

ಬೆಂಗಳೂರು: ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ಉದ್ಧೇಶದಿಂದ ರಾಜ್ಯ ಸರ್ಕಾರ ಮಹತ್ವದ ಅಧಿಸೂಚನೆ ಹೊರಡಿಸಿದ್ದು, ನೇರ ನೇಮಕಾತಿ ಮೂಲಕ ನೇಮಕ ಮಾಡಿಕೊಳ್ಳುವ ಎಲ್ಲಾ ರೀತಿಯ ಅಂದರೆ ಗ್ರೂಪ್ ’ಎ’ ನಿಂದ ಗ್ರೂಪ್ ’ಡಿ’ ವರೆಗಿನ ಹುದ್ದೆಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಶೇ.೧ರಷ್ಟು ಮೀಸಲಾತಿ ನೀಡಬೇಕೆಂದು ಆದೇಶಿಸಿದೆ.

ಹಿಂದಿನ ಸರಕಾರದಲ್ಲಿ ಕಾನೂನು ಸಚಿವರಾಗಿದ್ದ ಟಿ.ಬಿ. ಜಯಚಂದ್ರ ಅವರು ಮೀಸಲಾತಿ ಕೊಡುವ  ಪ್ರಸ್ತಾಪವಿಟ್ಟಿದ್ದರು. ಆದರೀಗ ಹೈಕೋರ್ಟ್ ಆದೇಶದಂತೆ ರಾಜ್ಯ ಬಿಜೆಪಿ ಸರ್ಕಾರ ಶೇ.೧ರಷ್ಟು ಮೀಸಲಾತಿ ನೀಡಿ ಅಧಿಸೂಚನೆ ಹೊರಡಿಸಿದೆ.

ಲೈಂಗಿಕ ಅಲ್ಪಸಂಖ್ಯಾತರಿಗೆ ಮೀಸಲಾತಿ ಕಲ್ಪಿಸಲು 1977ರ ಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ ನೇಮಕಾತಿ) ನಿಯಮಗಳ ನಿಯಮ 9ನ್ನು ತಿದ್ದುಪಡಿ ಮಾಡಲಾಗಿದೆ. ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಜಾರಿಗೊಳಿಸುವಂತೆ ನ್ಯಾಯಾಲಯವು ಕಳೆದ ವರ್ಷ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಅದರಂತೆ ಜುಲೈ 6,2021 ರಂದು ಅಧಿಸೂಚನೆ ಹೊರಡಿಸಿರುವ ಸರ್ಕಾರ ಲೈಂಗಿಕ ಅಲ್ಪಸಂಖ್ಯಾತರಿಗೆ ಮೀಸಲಾತಿ ನಿಗದಿಪಡಿಸಿ ಆದೇಶ ಹೊರಡಿಸಿದೆ.

ಲೈಂಗಿಕ ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡುತ್ತಿರುವ ಸಂಗಮ ಎಂಬ ಸಂಸ್ಥೆಯು ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ಅಧಿಸೂಚನೆಯ ಕರಡನ್ನು ಸಲ್ಲಿಸಿತ್ತು.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಇಂದಿನಿಂದ (ಮೇ19) 5 ದಿನ ಧಾರಾಕಾರ ಮಳೆ

ಸರಕಾರದ ಈ ಅಧಿಸೂಚನೆಯ ಪ್ರಕಾರ ಜನರಲ್ ಮೆರಿಟ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮತ್ತು ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ವಿಭಾಗಗಳಲ್ಲಿಯೂ ಲೈಂಗಿಕ ಅಲ್ಪಸಂಖ್ಯಾತರಿಗೆ ಶೇ.1ರಷ್ಟು ಮೀಸಲಾತಿ ಲಭ್ಯವಿರುತ್ತದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement