ಗದಗ: ಆಗಸ್ಟ 14 ರಂದು ಮೆಗಾ ಲೋಕ್ ಅದಾಲತ್

posted in: ರಾಜ್ಯ | 0

ಗದಗ: ಅಗಸ್ಟ 14 ರಂದು ಜಿಲ್ಲಾದ್ಯಂತ  ನಡೆಯುವ ಮೆಗಾ ಲೋಕ್ ಅದಾಲತ್‌ ನಲ್ಲಿ ಸಾರ್ವಜನಿಕರು ಹೆಚ್ಚು ಹೆಚ್ಚು ಪಾಲ್ಗೊಂಡು ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥ್ಯ ಮಾಡಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಶ್ರೀಮತಿ ಎಸ್. ಮಹಾಲಕ್ಷ್ಮಿ ನೇರಳೆ ಅವರು ಹೇಳಿದರು.

ಜಿಲ್ಲಾ ನ್ಯಾಯಾಯಲದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಾರ್ವಜನಿಕರು ಚಾಲ್ತಿಯಲ್ಲಿರುವ ಪ್ರಕರಣಗಳು, ನ್ಯಾಯಾಲಯಕ್ಕೆ ದಾಖಲಿಸದೇ ಇರುವ ಪ್ರಕರಣಗಳನ್ನು ವ್ಯಾಜ್ಯ ಪ್ರಕರಣಗಳೆಂದು ಪರಿಗಣಿಸಿ ವಿವಿಧ ಪ್ರಕರಣಗಳಾದ ಮೊಟಾರು ವಾಹನ ಅಪಘಾತ ಪರಿಹಾರ ಪ್ರಕರಣ, ಭೂ ಸ್ವಾಧೀನ ಪ್ರಕರಣ, ವಿಚ್ಛೇಧನ ಹೊರತುಪಡಿಸಿ ವೈವಾಹಿಕ ಹಾಗೂ ಜೀವನಾಂಶ ಪ್ರಕರಣ,  ಕ್ರಿಮಿನಲ್ ಪ್ರಕರಣ, ಬ್ಯಾಂಕುಗಳಿಗೆ ಸಂಬಂಧಿಸಿದ ಚೆಕ್ ಬೌನ್ಸ್ ಪ್ರಕರಣ ಹಾಗೂ ಕೋವಿಡ್ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವು ಪ್ರಕರಣಗಳನ್ನು ಆನ್ ಲೈನ್, ವಿಡಿಯೋ ಕಾನ್ಫರೆನ್ಸ್, ಈ ಮೇಲ್, ಎಸ್.ಎಮ್.ಎಸ್, ವಾಟ್ಸ್ ಆಪ್, ಎಲೆಕ್ಟ್ರಾನ್ ಮೋಡ್ ಸಂಪರ್ಕಿಸಿ ಅಥವಾ ಖುದ್ದಾಗಿ ಹಾಜರಾಗಿ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ. ಈ ಮೇಗಾ ಲೋಕ್ ಅದಾಲತ ಪ್ರಯೋಜನ ಪಡೆಯುವಂತೆ ಕೋರಿದರು.

ಪ್ರಮುಖ ಸುದ್ದಿ :-   ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

ಲೋಕ ಅದಾಲತ್‌ನ್ನು ತಾಲ್ಲೂಕು ಭಾಗದ ವರೆಗೆ ವಿಸ್ತರಿಸಲಾಗಿದ್ದು ರೋಣ, ನರಗುಂದ, ಮುಂಡರಗಿ ಮತ್ತು ಲಕ್ಷ್ಮೇಶ್ವರ ತಾಲ್ಲೂಕಾವಾರಿನ ಪ್ರಕರಣಗಳನ್ನೂ ಮೆಗಾ ಲೋಕ ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು.  ಇದರಿಂದ ಹೆಚ್ಚಿನ ಹಣ ಮತ್ತು ಸಮಯ ವ್ಯಯಿಸುವುದನ್ನು  ನಿಯಂತ್ರಿಸಬಹುದಾಗಿದೆ. ಕಕ್ಷಿದಾರರು ಯಾವುದೇ ವಿರೋಧ ವ್ಯಕ್ತ ಪಡಿಸದೆ ಪರಸ್ಪರ ಉತ್ತಮ ಬಾಂಧವ್ಯ ಬೆಳಸಿಕೊಳ್ಳಲು ಲೋಕ ಅದಾಲತ್ ಸಹಾಯಕವಾಗಲಿದೆ. ಮಾಧ್ಯಮದಲ್ಲಿ ಈ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳುವುದರಿಂದ ಸಾರ್ವಜನಿಕರಿಗೆ ಮಾಹಿತಿ ತಲುಪಿದಂತಾಗುತ್ತದೆ ಎಂದು ಹೇಳಿದರು.

ಹಿರಿಯ ದಿವಾಣಿ ನ್ಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ.ಸಲಗರೆಯವರು ನಗರ ಸಭೆಯ ವಿವಿಧ ತೆರಿಗೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಕಡಿಮೆ ಧರದಲ್ಲಿ ಇತ್ಯರ್ಥಪಡಿಸಲಾಗುವುದು ಎಂದರು.

ಜಿಲ್ಲಾ ವಕೀಲ ಸಂಘದ ಅಧ್ಯಕ್ಷ ಎಂ.ಎ. ಮೌಲ್ವಿ ಮಾತನಾಡಿ ಲೋಕ ಅದಾಲತ್‌ಗೆ ಸಂಬಂಧಿಸಿದಂತೆ ಕಳೆದ ವರ್ಷ ರಾಜ್ಯದಲ್ಲಿಯೇ ಗದಗ ಜಿಲ್ಲಾ ನ್ಯಾಯಾಲಯವು ಅಧಿಕ ಪ್ರಕರಣಗಳನ್ನು ಇತ್ಯರ್ಥಪಡಿಸಿ  ಉತ್ತಮ ಸಾಧನೆ ಗೈದಿತ್ತು. ಬಾಕಿ ಉಳಿದಿರುವ  ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು  ಮೆಗಾ ಲೋಕ ಅದಾಲತ್  ಸುವರ್ಣವಕಾಶ ಒದಗಿಸುತ್ತಿದ್ದು  ಸಾರ್ವಜನಿಕರು ಇದರ ಸದುಪಯೋಗ ಪಡೆಕೊಳ್ಳಬೇಕು.

ಪ್ರಮುಖ ಸುದ್ದಿ :-   ೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

ಪತ್ರಿಕಾಗೊಷ್ಠಿಯಲ್ಲಿ ಬಿ.ಎಸ್.ಎನ್.ಎಲ್, ಬ್ಯಾಂಕ್, ಹೆಸ್ಕಾಂ, ನಗರಸಭೆ ಅಧಿಕಾರಿಗಳು ಉಪಸ್ಥಿತರಿದ್ದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement