ತಾಪಂ-ಜಿಪಂ ಮೀಸಲಾತಿ ನಿಗದಿಗೆ ಸಚಿವ ಈಶ್ವರಪ್ಪ ಅಸಮಾಧಾನ

ಕಲಬುರಗಿ: ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಪ್ರತಿನಿಧಿಯಾಗಿ ಇದು ನನ್ನ ವಯಕ್ತಿಕ ಅಭಿಪ್ರಾಯವೇ ಹೊರತು ಸಚಿವನಾಗಿ ಅಲ್ಲ ಎಂದು ಹೇಳಿದ್ದಾರೆ.

ಡಿಸೆಂಬರ್ ವರೆಗೆ ಚುನಾವಣೆ ಮುಂದೂಡಬೇಕೆಂದು ಸರ್ಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಇದ್ದಕ್ಕಿದ್ದಂತೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಮೀಸಲಾತಿ ನಿಗದಿಗೊಳಿಸಿ ಘೋಷಿಸಲಾಗಿದೆ. ಇದೊಂದು ಆತುರದ ನಿರ್ಧಾರ ಎಂದರು.

ರಾಜ್ಯ ಚುನಾವಣಾ ಆಯೋಗದ ನಡೆಯನ್ನು ಪ್ರಶ್ನಿಸಿರುವ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸರ್ಕಾರ ಚುನಾವಣಾ ಆಯೋಗದ ಜೊತೆ ಸಹಕಾರದಿಂದ ವರ್ತಿಸಿದೆ. ರಾಜಕೀಯ ಪಕ್ಷವಾಗಿ ಬಿಜೆಪಿ ಚುನಾವಣೆ ಎದುರಿಸಲು ಸಿದ್ಧವಾಗಿದೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement